ಹಾಸನಾಂಬ ದೇವಾಲಯ TNIE Photo
ರಾಜ್ಯ

ಹಾಸನಾಂಬ ದೇವಾಲಯದ ಬಾಗಿಲು ಇಂದು ಓಪನ್​: 9 ದಿನ ದರ್ಶನಕ್ಕೆ ಅವಕಾಶ

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.

ಹಾಸನ: ಗುರುವಾರ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಮುಖ್ಯ ಅರ್ಚಕ ನಾಗರಾಜ್ ನೇತೃತ್ವದ ಎಂಟು ಪುರೋಹಿತರ ಗುಂಪಿನ ನಿರಂತರ ಧಾರ್ಮಿಕ ಕ್ರಿಯೆಗಳ ನಡುವೆ ಪ್ರಸಿದ್ಧ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಿದೆ.

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ. ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

ಹಾಸನಾಂಬ ದೇವಾಲಯ

ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ. ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಈ ನಡುವೆ ನೈವೇದ್ಯದ ಸಂದರ್ಭ ಹೊರತು ಪಡಿಸಿ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶವಿರುತ್ತದೆ” ಎಂದು ದೇಗುಲದ ಪ್ರಧಾನ ಅರ್ಚಕರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT