ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ 
ರಾಜ್ಯ

ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ; 7 ಕಾರು ಜಖಂ, ಮಗುವಿಗೆ ಗಾಯ

ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ.

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಗುರುವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ.

ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ.

ಪರಿಣಾಮ 7 ಕಾರುಗಳೂ ಒಂದರ ಹಿಂದೆ ಒಂದು ಗುದ್ದುಕೊಂಡು ಜಖಂ ಆಗಿದ್ದು, ಈ ಪೈಕಿ ಒಂದು ಕಾರಿನಲ್ಲಿದ್ದ ಮಗುವಿನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಯಲಹಂಕಕ್ಕೆ ತೆರಳುವ ಮುಖ್ಯರಸ್ತೆಯಲ್ಲೇ ಈ ಅಪಘಾತ ಸಂಭವಿಸಿದ ಪರಿಣಾಮ, ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಫ್ಲೈ ಓವರ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿವೆ.

ಇಂದೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT