ವರ್ತೂರು ಕೆರೆ( ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು: ವರ್ತೂರು ಕೆರೆಯಲ್ಲಿ 19 ವರ್ಷದ ಯುವಕ ಕೊಚ್ಚಿ ಹೋಗಿ ದುರಂತ

ವರ್ತೂರು ಬಳಿಯ ಶೆಡ್‌ಗಳಲ್ಲಿ ವಾಸಿಸುವ ಇಝರುಲ್ ತಮ್ಮ ಇಬ್ಬರು ಚಿಕ್ಕಪ್ಪಂದಿರ ಜೊತೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೊಳೆ ಬಳಿ ಪ್ಲಾಸ್ಟಿಕ್ ತ್ಯಾಜ್ಯದ ಬಾಟಲಿಗಳು ಮತ್ತು ಚೀಲಗಳನ್ನು ಎಸೆಯಲು ಹೋಗಿದ್ದರು.

ಬೆಂಗಳೂರು: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ 19 ವರ್ಷದ ಯುವಕ ಗುರುವಾರ ಬೆಳಗ್ಗೆ ವರ್ತೂರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ.

ಇಝಾರುಲ್ ಎಸ್.ಕೆ ಎಂಬಾತ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ವರ್ತೂರು ಕೆರೆಯಲ್ಲಿ ಕೊಚ್ಚಿ ಹೋಗಿದ್ದಾನೆ. ವರ್ತೂರು ಬಳಿಯ ಶೆಡ್‌ಗಳಲ್ಲಿ ವಾಸಿಸುವ ಇಝರುಲ್ ಮತ್ತು ಅವರ ಇಬ್ಬರು ಚಿಕ್ಕಪ್ಪಂದಿರ ಜೊತೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೊಳೆ ಬಳಿ ಪ್ಲಾಸ್ಟಿಕ್ ತ್ಯಾಜ್ಯದ ಬಾಟಲಿಗಳು ಮತ್ತು ಚೀಲಗಳನ್ನು ಎಸೆಯಲು ಹೋಗಿದ್ದರು ಎಂದು ಸ್ವರಾಜ್ ಅಭಿಯಾನ್ ಎನ್‌ಜಿಒ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಆರ್ ಕಲೀಮುಲ್ಲಾ ತಿಳಿಸಿದ್ದಾರೆ.

ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಳೆ ಉಕ್ಕಿ ಹರಿಯುತ್ತಿತ್ತು. ಇಝರುಲ್ ಅವರ ಚಿಕ್ಕಪ್ಪರು ಅವನನ್ನುತುಂಬಿ ಹರಿಯುತ್ತಿದ್ದ ಹೊಳೆಯಿಂದ ರಿಸಲು ಪ್ರಯತ್ನಿಸಿದರು, ಆದರೆ ಸಾಧ್ಯವಾಗಲಿಲ್ಲ. ಶೋಧ ಕಾರ್ಯಾಚರಣೆ ಆರಂಭಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮತ್ತು ಬಿಬಿಎಂಪಿ ಸಿಬ್ಬಂದಿ ಕತ್ತಲೆಯಾದ ಕಾರಣ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಶುಕ್ರವಾರ ಶೋಧವನ್ನು ಪುನರಾರಂಭಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್