ಕಟ್ಟಡ ಕುಸಿತಗೊಂಡಿರುವ ಸ್ಥಳ. 
ರಾಜ್ಯ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 9ಕ್ಕೆ ಏರಿಕೆ!

6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿತ್ತು.

ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇಂದು ನಡೆದ ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಏಳುಮಲೈ ಎಂದು ಗುರ್ತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿತ್ತು. ಘಟನೆ ಬೆನ್ನಲ್ಲೇ ಅಗ್ನಿಶಾಮಕ ಮತ್ತು ತುರ್ತು ವಿಭಾಗ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸರು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ, ಇವರ ಪುತ್ರ ಭುವನ್ ರೆಡ್ಡಿಯನ್ನು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೆ, ಕಟ್ಟಡದ 4ನೇ ಅಂತಸ್ತಿನವರೆಗೂ ನಿರ್ಮಾಣದ ಜವಾಬ್ದಾರಿ ವಹಿಸಿದ್ದ ಗುತ್ತಿಗೆದಾರ ಮುನಿಯಪ್ಪನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ