ಬಿ.ಎಂ.ಪಾರ್ವತಿ, ಸಿಎಂ ಸಿದ್ದರಾಮಯ್ಯ 
ರಾಜ್ಯ

ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ!

ಇಂದು ಪಾರ್ವತಿ ಅವರನ್ನು ಕರೆಸಿ, ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಪಾರ್ವತಿ ಅವರನ್ನು ಕರೆಸಿ, ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 25 ರಂದು ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ ಹಾಗೂ ಭೂಮಿ ಖರೀದಿಸಿ ಉಡುಗೊರೆ ನೀಡಿದ ಸಿದ್ದರಾಮಯ್ಯ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಭೂಮಿ ಮಾಲೀಕ ದೇವರಾಜು ಮತ್ತು ಇತರರ ವಿರುದ್ಧ ಸೆಪ್ಟೆಂಬರ್ 27 ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಒಂದು ದಿನದ ನಂತರ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿತ್ತು. ಮುಡಾದಲ್ಲಿ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಈ FIR ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕೂಡಾ ECIR ದೂರು ದಾಖಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!