ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮೂಲಗಳ ಪ್ರಕಾರ ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಂಚಾರಿ ನಿಯಮ ಉಲ್ಲಂಗಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳೆಯನ್ನು ಸಂಚಾರಿ ಪೊಲೀಸ್ ಪೇದೆ ನಿಲ್ಲಿಸಿ ಪ್ರಶ್ನಿದಾಗ ಆಕೆ ಸಂಘರ್ಷಕ್ಕಿಳಿದಿದ್ದಾಳೆ ಎನ್ನಲಾಗಿದೆ. ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಾಲಿನಿಂದ ಒದ್ದು ಸಮವಸ್ತ್ರದ ಕಾಲರ್ ಪಟ್ಟಿ ಹಿಡಿದಿದ್ದಾರೆ.
ಇವಿಷ್ಟೂ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಪೊಲೀಸ್ ಮೇಲೆ ಮಹಿಳೆ ಹಲ್ಲೆ ಮಾಡುವ ಇಬ್ಬರು ಪೊಲೀಸರು ಹಾಗೂ ಒಂದು ಹೊಯ್ಸಳ ವಾಹನ ಕೂಡ ಇದೆ. ಆದರೂ ಯಾರೂ ಕೂಡ ಮಹಿಳೆಯನ್ನು ತಡೆಯುವ ಕೆಲಸ ಮಾಡಿಲ್ಲ. ಮಹಿಳಾ ಪೊಲೀಸರ ಬರುವಿಕೆಗಾಗಿ ಕಾಯುತ್ತಿದ್ದರು ಎಂದು ಹೇಳಲಾಗಿದೆ.
ಒಟ್ಟಾರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸ್ ಮೇಲೆ ಹಲ್ಲೆ ಮಾಡಿದ ಮಹಿಳೆಯನ್ನು ಉತ್ತರ ಭಾರತದ ನಿವಾಸಿ ಸೋನಮ್ ಎಂದು ಗುರುತಿಸಲಾಗಿದ್ದು, ಆಕೆ ಉದ್ಯೋಗದ ನಿಮಿತ್ತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.