ಬೆಳಗಾವಿಯ ಕಿತ್ತೂರಿನಲ್ಲಿ ಶುಕ್ರವಾರ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಣಿ ಚೆನ್ನಮ್ಮನವರಿಗೆ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ. Photo | Express
ರಾಜ್ಯ

ರಾಜ್ಯದ 3 ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಉಪಚುನಾವಣೆಗೆ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸಲಾಗಿತ್ತು. ಗೆಲುವನ್ನು ಖಚಿತಪಡಿಸಿಕೊಳ್ಳಲು ಸಮರ್ಥ ಅಭ್ಯರ್ಥಿಗಳನ್ನು ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಈ ಬಾರಿ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ.

ಹುಬ್ಬಳ್ಳಿ: ನವೆಂಬರ್ 13 ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸಲಾಗಿತ್ತು. ಗೆಲುವನ್ನು ಖಚಿತಪಡಿಸಿಕೊಳ್ಳಲು ಸಮರ್ಥ ಅಭ್ಯರ್ಥಿಗಳನ್ನು ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಈ ಬಾರಿ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಭಾವನಾತ್ಮಕ ಭಾಷಣಗಳ ಕುರಿತು ಮಾತನಾಡಿದ ಅವರು, ಪ್ರತಿ ಬಾರಿ ಇಂತಹ ಭಾಷಣಗಳಿಂದ ಜನರು ಪ್ರಭಾವಿತರಾಗುವುದಿಲ್ಲ ಎಂದು ತಿಳಿಸಿದರು.

ಏತನ್ಮಧ್ಯೆ ಶಿಗ್ಗಾಂವಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಹಾಗೂ ಅಜೀಂಪೀರ್ ಖಾದ್ರಿ ನಡುವೆ ಪೈಪೋಟಿ ಏರ್ಪಟ್ಟಿರುವುದನ್ನು ಒಪ್ಪಿಕೊಂಡ ಸಿದ್ದರಾಮಯ್ಯ, ಪಠಾಣ್ ಅವರು ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದು, ಪಕ್ಷ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕೆಂದು ಬಯಸಿದೆ. ಇದೇ ವೇಳೆ ಖಾದ್ರಿ ಅವರು ಇದೇ ಕ್ಷೇತ್ರದ ಸಮರ್ಥ ನಾಯಕರಾಗಿದ್ದು, ಬಂಡಾಯವಾಗಿ ಸ್ಪರ್ಧಿಸದಂತೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಹಿಂದಿನ ಚುನಾವಣೆಯಲ್ಲಿ ಪಠಾಣ್ ಅವರು 60 ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು, ಅಸಾಧಾರಣ ಎದುರಾಳಿ ಎಂಬುದನ್ನು ಸಾಬೀತುಪಡಿಸಿದ್ದಾರೆ. 2023ರಲ್ಲಿ ಶಿಗ್ಗಾಂವಿಯಿಂದ ಬಿಜೆಪಿ ಗೆದ್ದರೂ ಕಾಂಗ್ರೆಸ್ ಅಭ್ಯರ್ಥಿ ತೀವ್ರ ಪೈಪೋಟಿ ನೀಡಿದ್ದರು. ಲೋಕಸಭೆ ಚುನಾವಣೆಯಲ್ಲೂ ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್ 8,500 ಮತಗಳ ಮುನ್ನಡೆ ಸಾಧಿಸಿತ್ತು ಎಂದು ಹೇಳಿದರು.

ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು, ಇತ್ತೀಚಿಗೆ ನಗರದಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ್ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಚೆಕ್ ವಿತರಿಸಿದರು.

ಅಂಜಲಿ ಅಂಬಿಗೇರ್ ಅವರ ಕುಟುಂಬಕ್ಕೆ ಚೆಕ್ ವಿತರಣೆ ಮಾಡಲಾಗಿದೆ. ಐದು‌ ಲಕ್ಷದ ಚೆಕ್ ನೀಡಿದ್ದೇವೆ. ಅವರಿಗೆ ಒಂದು ಮನೆಯನ್ನೂ ಕೂಡ ಸರ್ಕಾರದಿಂದ ಮಂಜೂರು ಮಾಡಲಾಗುವುದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ