ಹಳ್ಳಿಕಾರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ.

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ರಾಜ್ಯ ಹಳ್ಳಿಕಾರರ ಸಂಘ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದರು.

ಸಮಾಜದಲ್ಲಿನ ವಿವಿಧ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯವಾಗಿದೆ. 2011 ರ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ರಷ್ಟು ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ ಎಂದು ಹೇಳಿದರು.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT