ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು-ಅಯೋಧ್ಯೆ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ಇಂದು ಬೆಂಗಳೂರಿನಿಂದ ಅಯೋಧ್ಯೆಗೆ ತೆರಳಿದ್ದ ಆಕಾಶ ಏರ್‌ಲೈನ್ಸ್ ವಿಮಾನ ಅಯೋಧ್ಯೆಯ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.

ಅಯೋಧ್ಯೆ: ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರು - ಅಯೋಧ್ಯೆ ತುರ್ತು ಭೂಸ್ಪರ್ಶ ಮಾಡಿದೆ.

ಇಂದು ಬೆಂಗಳೂರಿನಿಂದ ಅಯೋಧ್ಯೆಗೆ ತೆರಳಿದ್ದ ಆಕಾಶ ಏರ್‌ಲೈನ್ಸ್ ವಿಮಾನ ಅಯೋಧ್ಯೆಯ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.

173 ಪ್ರಯಾಣಿಕರಿದ್ದ ಬೆಂಗಳೂರು - ಅಯೋಧ್ಯೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ವಿಮಾನ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದು ಹುಸಿಬಾಂಬ್‌ ಬೆದರಿಕೆ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್ ಅವರು​ ಸ್ಪಷ್ಟಪಡಿಸಿದ್ದಾರೆ.

ಇಂದು ಮಧ್ಯಾಹ್ನ 1:30ರ ಸುಮಾರಿಗೆ ಬೆಂಗಳೂರು - ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್‌ಲೈನ್ಸ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಆದೇಶಿಸಲಾಯಿತು ಎಂದು ವಿನೋದ್ ಕುಮಾರ್ ತಿಳಿಸಿದ್ದಾರೆ.

ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬುಧವಾರ ಸಹ ನಮಗೆ ಇದೇ ರೀತಿಯ ಹುಸಿಬಾಂಬ್​ ಕರೆ ಬಂದಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT