ಸಿದ್ದೇಶ್ವರ ಸ್ವಾಮಿ ದೇವರ ದರ್ಶನ ಪಡೆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬ 
ರಾಜ್ಯ

ಉಪ ಚುನಾವಣೆ ನಡುವೆ ಕುಮಾರಸ್ವಾಮಿ ಕುಟುಂಬಕ್ಕೆ ಸಿದ್ದೇಶ್ವರ ಸ್ವಾಮಿ ಪ್ರಸಾದ! ಚರ್ಚೆ ಶುರು

ಎಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸಿದ್ದೇಶ್ವರ ಸ್ವಾಮಿ ಬಲಗಡೆಯಿಂದ ಹೂವು ನೀಡಿದ್ದು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲಲಿದ್ದಾರೆ ಎಂಬ ಶುಭ ಸೂಚನೆಯಾಗಿದೆ ಎನ್ನುವ ಚರ್ಚೆ ಶುರುವಾಗಿದೆ.

ಹಾಸನ: ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳ ವಿಧಾನಸಭಾ ಚುನಾವಣೆಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯ ಹಾಗೂ ದೇಶದ ಗಮನ ಸೆಳೆದಿದೆ.

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ನಡುವಿನ ನೇರಾ ಹಣಾಹಣಿ ಹಾಗೂ ಕಾಂಗ್ರೆಸ್-ಎನ್ ಡಿಎ ಪಕ್ಷಗಳ ಪ್ರತಿಷ್ಠೆಯೇ ಇದಕ್ಕೆ ಕಾರಣ.

ಈ ಮಧ್ಯೆ ಎಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸಿದ್ದೇಶ್ವರ ಸ್ವಾಮಿ ಬಲಗಡೆಯಿಂದ ಹೂವು ನೀಡಿದ್ದು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲಲಿದ್ದಾರೆ ಎಂಬ ಶುಭ ಸೂಚನೆಯಾಗಿದೆ ಎನ್ನುವ ಚರ್ಚೆ ಶುರುವಾಗಿದೆ.

ಹೌದು. ಪತ್ನಿ, ಸೊಸೆ , ಮೊಮ್ಮಗನ ಜೊತೆಗೆ ಕುಮಾರಸ್ವಾಮಿ ಹಾಸನಾಂಬೆ ದರ್ಶನ ನಂತರ ಸಿದ್ದೇಶ್ವರ ಸ್ವಾಮಿ ದರ್ಶನ ಮಾಡಿದಾಗ ಬಲಗಡೆಯಿಂದ ಹೂ ಬಿದ್ದಿದೆ.ದೇವರ ಮೇಲಿಂದ ಹೂವು ಬಿದ್ದಾಗ ಪತ್ನಿ ಅನಿತಾ ಅವರು ಕುಮಾರಸ್ವಾಮಿ ಅವರಿಗೆ ಕೈ ಸನ್ನೆ ಮಾಡಿ ತಿಳಿಸಿದ್ದಾರೆ.

ಶುಭ ಸಮಾರಂಭ ಆಯೋಜಿಸುವ ಮುನ್ನ ಭಕ್ತರು ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕದ ನಂತರ ಪ್ರಸಾದ ಕೇಳುವುದು ವಾಡಿಕೆ. ಅದರಂತೆ ಪ್ರಸಾದ ಸಿಕ್ಕ ನಂತರ ಶುಭ ಕಾರ್ಯ ನೆರವೇರಿರುವ ನಂಬಿಕೆಯಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!