ಬೆಂಗಳೂರು: ರಾಜ್ಯದ 4,787 ಒಳರೋಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಸರಿಯಾದ ಅಗ್ನಿ ಅವಘಡಗಳ ಸುರಕ್ಷತಾ ಸಾಧನಗಳ ಕೊರತೆ ಮತ್ತು ಅಗ್ನಿ ಸುರಕ್ಷತಾ ಮಾನದಂಡಗಳಿಗೆ ಬದ್ಧವಾಗಿಲ್ಲ ಎಂದು ಕಂಡುಬಂದಿದೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ನಡೆಸಿದ ತಪಾಸಣೆಯಲ್ಲಿ ತಿಳಿದು ಬಂದಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಸಂಭವಿಸಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ, ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲಾಯಿತು ಎಂದು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು TNIE ಗೆ ತಿಳಿಸಿದರು.
ಅಗ್ನಿಶಾಮಕ ಅಧಿಕಾರಿಗಳು ಇದುವರೆಗೆ 3,000 ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಉಪನಿರ್ದೇಶಕ (ವೈದ್ಯಕೀಯ-2) ಡಾ ವಿವೇಕ್ ದೊರೈ, ಕಟ್ಟುನಿಟ್ಟಾದ ಅಗ್ನಿ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲು ಆರೋಗ್ಯ ಇಲಾಖೆ ಆಸ್ಪತ್ರೆಗಳಿಗೆ ಸೂಚಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ರಾಜ್ಯವು ಪ್ರಯೋಗಾಲಯಗಳು ಮತ್ತು ಚಿಕಿತ್ಸಾಲಯಗಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ 30,000 ಖಾಸಗಿ ಆಸ್ಪತ್ರೆಗಳನ್ನು ಹೊಂದಿದೆ. ಪ್ರಮುಖವಾಗಿ ಒಳರೋಗಿಗಳ ಕಟ್ಟಡಗಳಿಗೆ ಆದ್ಯತೆ ನೀಡಲಾಗಿದ್ದು, ನಂತರದ ಚಿಕಿತ್ಸಾಲಯಗಳು ಮತ್ತು ಇತರ ಸಂಸ್ಥೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
21 ಮೀಟರ್‌ಗಿಂತ ಕಡಿಮೆ ಇರುವ ಕಟ್ಟಡಗಳು ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬೇಕಾಗಿಲ್ಲ ಎಂಬ ನಿಯಮವಿತ್ತು,ಆದರೆ ಈಗ ಹಳೆಯ ಸ್ವಯಂ ಘೋಷಣೆ ಅಮಾನ್ಯವಾಗಿದೆ ಮತ್ತು 21 ಮೀಟರ್‌ಗಿಂತ ಕೆಳಗಿನ ಕಟ್ಟಡಗಳು ಅಗ್ನಿಶಾಮಕ ಇಲಾಖೆಯಿಂದ ಎನ್‌ಒಸಿ ಪಡೆಯಬೇಕು ಎಂದು ಅಕ್ಟೋಬರ್ 15 ರಂದ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ. 21 ಮೀಟರ್‌ಗಿಂತ ಹೆಚ್ಚಿನ ಕಟ್ಟಡಗಳನ್ನು ರಾಷ್ಟ್ರೀಯ ಕಟ್ಟಡ ಸಂಹಿತೆಯ (NBC) ಅಡಿಯಲ್ಲಿ ವರ್ಗೀಕರಿಸಲಾಗಿದೆ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಂದ NOC ಪಡೆಯಬೇಕು ಎಂದು ಆದೇಶ ಹೊರಡಿಸಿದೆ.
ಕೆಪಿಎಂಇ ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ ಆರೋಗ್ಯ ಇಲಾಖೆಯು ರಾಜ್ಯದಲ್ಲಿ 4,787 ಒಳರೋಗಿಗಳ ಖಾಸಗಿ ಆಸ್ಪತ್ರೆಗಳ ಪಟ್ಟಿಯನ್ನು ಒದಗಿಸಿದೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು (ಡಿಎಫ್‌ಒಗಳು) ಇದುವರೆಗೆ 3,000 ಕ್ಕೂ ಹೆಚ್ಚು ತಪಾಸಣೆ ನಡೆಸಿದ್ದಾರೆ. ಪರಿಶೀಲಿಸಿದ ಕಟ್ಟಡಗಳಲ್ಲಿ 50% ಕ್ಕಿಂತ ಹೆಚ್ಚು ಅಗ್ನಿ ಸುರಕ್ಷತೆ ಕ್ರಮಗಳನ್ನು ಅನುಸರಿಸದಿರುವುದು ಕಂಡುಬಂದಿದೆ. ಡಿಎಫ್‌ಒಗಳು ಉನ್ನತ ಆರೋಗ್ಯ ಅಧಿಕಾರಿಗಳಿಗೆ ಆಡಿಟ್ ವರದಿಯನ್ನು ಸಲ್ಲಿಸಿದ್ದಾರೆ, ಮರುಪರಿಶೀಲನೆಯ ಮೊದಲು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು 90 ದಿನಗಳ ಗಡುವನ್ನು ನಿಗದಿಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹೊಸ ಸುತ್ತೋಲೆಯ ಪ್ರಕಾರ, ಎಲ್ಲಾ ಒಳರೋಗಿಗಳ ಖಾಸಗಿ ಆಸ್ಪತ್ರೆಗಳಲ್ಲಿ ಅಗ್ನಿಶಾಮಕಗಳು, ಪ್ರಥಮ ಚಿಕಿತ್ಸಾ ಕಿಟ್‌ಗಳು, ಹೋಸ್ ರೀಲ್‌ಗಳು, ಸ್ವಯಂಚಾಲಿತ ಸ್ಪ್ರಿಂಕ್ಲರ್ ವ್ಯವಸ್ಥೆ ಮತ್ತು ಕೈ ಚಾಲಿತ ಎಲೆಕ್ಟ್ರಾನಿಕ್ ಅಲಾರ್ಮ್ ಸಿಸ್ಟಮ್‌ಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು.