ದಿನೇಶ್ ಕುಮಾರ್ 
ರಾಜ್ಯ

ಬೆಂಗಳೂರು: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಮನೆ ಮೇಲೆ ಇಡಿ ದಾಳಿ

ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ಅವರು ವಾಸವಾಗಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ಮಾಡಿದ್ದಾರೆ.

ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಸೈಟು ಹಂಚಿಕೆ ಹಗರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಸೋಮವಾರ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮತ್ತು ಬಿಲ್ಡರ್​ ಎನ್​. ಮಂಜುನಾಥ್​ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ಅವರು ವಾಸವಾಗಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು ಎನ್ನಲಾಗಿದೆ. ಇಡಿ ಅಧಿಕಾರಿಗಳು ಮನೆಗೆ ಬಂದ ವಿಚಾರ ತಿಳಿದು ವಾಕಿಂಗ್‌ ಮಾಡುತ್ತಿದ್ದ ಸ್ಥಳದಿಂದಲೇ ದಿನೇಶ್‌ ಕುಮಾರ್‌ ಪರಾರಿಯಾಗಿದ್ದಾರೆ.

ಇನ್ನು ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದರು. ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು ಮತ್ತು ಇತ್ತೀಚಿಗೆ ಅವರನ್ನು ಅಮಾನತು ಸಹ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್