ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ 
ರಾಜ್ಯ

'ಖಾಸಗಿತನ ಮೂಲಭೂತ ಹಕ್ಕು' ಐತಿಹಾಸಿಕ ತೀರ್ಪಿನ ಅರ್ಜಿದಾರ ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ ನಿಧನ

2012ರಲ್ಲಿ ಆಧಾರ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಟ್ಟಮೊದಲ ಬಾರಿಗೆ ರಿಟ್ ಅರ್ಜಿ ಸಲ್ಲಿಸಿದವರು ನ್ಯಾಯಮೂರ್ತಿ ಪುಟ್ಟಸ್ವಾಮಿ.

ಬೆಂಗಳೂರು: 2017ರಲ್ಲಿ ಸುಪ್ರೀಂ ಕೋರ್ಟ್‌ ಖಾಸಗಿತನ ಮೂಲಭೂತ ಹಕ್ಕು ಎಂದು ಐತಿಹಾಸಿಕ ತೀರ್ಪು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ, ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಅವರು ಸೋಮವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

2012ರಲ್ಲಿ ಆಧಾರ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಟ್ಟಮೊದಲ ಬಾರಿಗೆ ರಿಟ್ ಅರ್ಜಿ ಸಲ್ಲಿಸಿದವರು ನ್ಯಾಯಮೂರ್ತಿ ಪುಟ್ಟಸ್ವಾಮಿ.

ಆಧಾರ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಪುಟ್ಟಸ್ವಾಮಿ ಅವರು ಮೊದಲು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಂತರ, 26 ಅರ್ಜಿಗಳನ್ನು ಸಲ್ಲಿಸಲಾಯಿತು ಮತ್ತು ಅಂತಿಮವಾಗಿ ಸುಪ್ರೀಂ ಕೋರ್ಟ್ ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎಂದು ತೀರ್ಪು ನೀಡಿತ್ತು.

ಫೆಬ್ರವರಿ 8, 1926 ರಂದು ಜನಿಸಿದ ಪುಟ್ಟಸ್ವಾಮಿ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಓದಿದ್ದಾರೆ ಮತ್ತು ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು 1952ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದು, 1977ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

1986 ರಲ್ಲಿ ನಿವೃತ್ತರಾದ ನಂತರ, ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿ, ಆಂಧ್ರಪ್ರದೇಶದ ಆಡಳಿತಾತ್ಮಕ ನ್ಯಾಯಮಂಡಳಿಯ ಅಧ್ಯಕ್ಷರಾಗಿ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ