ಸಿಎಂ ಸಿದ್ದರಾಮಯ್ಯ 
ರಾಜ್ಯ

ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲು ನಿರ್ಧಾರ.

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದರು.

ಎಸ್‌ಸಿಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ನಂಬಲರ್ಹ ದಾಖಲೆಗಳು ಹಾಗೂ ದತ್ತಾಂಶ ಸಂಗ್ರಹಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ನಿರ್ಧಾರ ಮಾಡಲಾಗಿದೆ. ಮೂರು ತಿಂಗಳಲ್ಲಿ ಆಯೋಗ ವರದಿ ನೀಡಲಿದೆ ಎಂದರು.

ಒಳಮೀಸಲಾತಿ ನೀಡುವಂತೆ ರಾಜ್ಯದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈ ಬಗ್ಗೆ ಚರ್ಚೆಗಳು ಮತ್ತು ಚಿಂತನೆಗಳು ನಡೆದಿವೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ‌ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ನಿರ್ಣಯ ಮಾಡಿದೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು.

ಆಯೋಗವು ತನ್ನ ವರದಿಯನ್ನು ಸಲ್ಲಿಸುವವರೆಗೆ ಮುಂಬರುವ ಎಲ್ಲಾ ನೇಮಕಾತಿಗಳನ್ನು ಕನಿಷ್ಠ ಮೂರು ತಿಂಗಳ ಕಾಲ ಮುಂದೂಡಲು ಸಂಪುಟ ನಿರ್ಧರಿಸಿದೆ. ಇಂದಿನಿಂದ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸುವುದಿಲ್ಲ. ಆಯೋಗದ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಾಟೀಲ್ ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ(SC, ST for reservation) ಒಳಗಡೆಯೇ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಒಪ್ಪಿಗೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT