ಸಂಗ್ರಹ ಚಿತ್ರ 
ರಾಜ್ಯ

Karnataka Examination Authority: ಎಲ್ಲಾ ಪರೀಕ್ಷೆಗಳಿಗೆ ಆಧಾರ್​ ಲಿಂಕ್ ಕಡ್ಡಾಯ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾವನೆ

ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ.

ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ.

ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ. ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾವನೆಗೆ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ. ಶೀಘ್ರದಲ್ಲೇ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ನೋಂದಣಿಯಲ್ಲಿ ಯಾವುದೇ ವಂಚನೆಯನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್​ ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.

ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಎಂಜಿನಿಯರಿಂಗ್ ಸೀಟು ಹಂಚಿಕೆಯ ಎಲ್ಲಾ ಸುತ್ತುಗಳು ಪೂರ್ಣಗೊಂಡ ನಂತರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಕೋಟಾದಡಿ ಸೀಟ್ ಬ್ಲಾಕಿಂಗ್ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೆಇಎ ಈ ಕ್ರಮ ಕೈಗೊಂಡಿದೆ.

ಹಲವಾರು ವಿದ್ಯಾರ್ಥಿಗಳು ಒಂದೇ ಐಪಿ ವಿಳಾಸವನ್ನು ಬಳಸಿಕೊಂಡು ಸೀಟು ಬ್ಲಾಕ್ ಮಾಡಿದ್ದಾರೆ. ಅವರು ಕೆಇಎಗೆ ನೀಡಿದ ಮೊಬೈಲ್ ಸಂಖ್ಯೆಗಳು ಮತ್ತು ಇಮೇಲ್ ಐಡಿಗಳು ನಕಲಿ ಎಂದು ಕಂಡುಬಂದಿದೆ. ಕೆಲ ಸಂದರ್ಭಗಳಲ್ಲಿ ಉನ್ನತ ಕಾಲೇಜುಗಳಲ್ಲಿ ಡಿಮ್ಯಾಂಡ್ ಇರುವ ವಿಭಾಗಗಳಲ್ಲಿ ಸೀಟುಗಳನ್ನು ಆರಿಸಿಕೊಂಡ ವಿದ್ಯಾರ್ಥಿಗಳು ಆ ಕಾಲೇಜುಗಳಿಗೆ ದಾಖಲಾಗದಿರುವುದು ಕಂಡುಬಂದಿದೆ. ಇದರ ಪರಿಣಾಮದಿಂದ ಕೆಸಿಇಟಿ ಕೋಟಾದಡಿ ಬರುವ ಅಂಥ ಎಲ್ಲಾ ಸೀಟುಗಳು ಮ್ಯಾನೇಜ್ ಮೆಂಟ್ ಕೋಟಾಕ್ಕೆ ಸೇರುವಂತಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭಗಳಲ್ಲಿ ಸೀಟ್ ಬ್ಲಾಕಿಂಗ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಮೂರನೇ ವ್ಯಕ್ತಿಗಳು ಕಾಲೇಜು ಆಡಳಿತ ಮಂಡಳಿಗಳೊಂದಿಗೆ ಮತ್ತು ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್