ಗೋಪಾಲ್ ಜೋಶಿ PTI
ರಾಜ್ಯ

ವಂಚನೆ ಪ್ರಕರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್, ತನಿಖೆಗೆ ಹೈಕೋರ್ಟ್ ಬ್ರೇಕ್!

ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿದ ದೂರಿನ ಮೇರೆಗೆ ಇತ್ತೀಚೆಗೆ ಬಂಧಿತರಾಗಿದ್ದ ಮೂವರು ಆರೋಪಿಗಳ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಅವರ ಪುತ್ರ ಅಜಯ್ ಜೋಶಿ ಮತ್ತು ಬೆಂಗಳೂರಿನ ವಿಜಯಲಕ್ಷ್ಮಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೆ ಅವರನ್ನು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿದ ದೂರಿನ ಮೇರೆಗೆ ಇತ್ತೀಚೆಗೆ ಬಂಧಿತರಾಗಿದ್ದ ಮೂವರು ಆರೋಪಿಗಳ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿದ್ದಾರೆ.

ದೂರಿನಲ್ಲಿ ಆರೋಪಿಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಟಿಕೆಟ್ ಕೊಡಿಸದೆ ಆರೋಪಿಗಳು ವಂಚನೆ ಮತ್ತು ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಮೊತ್ತವನ್ನು ಮರುಪಾವತಿಸಲು ಬದ್ಧರಾಗಿದ್ದೇವೆ ಎಂದು ಆರೋಪಿತ ಅರ್ಜಿದಾರರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಪ್ರಕರಣಕ್ಕೆ ತಡೆಯಾಜ್ಞೆ ನೀಡಲಾಗಿದೆ. ಪ್ರಲ್ಹಾದ್ ಜೋಶಿ ಪ್ರಕರಣದಿಂದ ದೂರ ಉಳಿದಿದ್ದು, ಸಹೋದರನಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?