ಡಿಬಿ ನಟೇಶ್ 
ರಾಜ್ಯ

ಮುಡಾ ಹಗರಣ: ಮಾಜಿ ಆಯುಕ್ತ ಡಿಬಿ ನಟೇಶ್ ಇಡಿ ವಶಕ್ಕೆ

ನಟೇಶ್‌ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್‌ ಅವರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ ಹಗರಣ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಟೇಶ್‌ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್‌ ಅವರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದು ನಟೇಶ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು. ನಟೇಶ್ ವಿರುದ್ಧ ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳನ್ನು ಅಕ್ರಮ ಹಂಚಿಕೆ ಮಾಡಿದ ಆರೋಪವಿದೆ. ವಿಚಾರಣೆ ವೇಳೆ ನಾನು ಯಾವುದೇ ತಪ್ಪು ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೇ ಪರಿಪಾಲಿಸಿದ್ದೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT