ಸಿಎಂ ಸಿದ್ದರಾಮಯ್ಯ 
ರಾಜ್ಯ

ವಕ್ಫ್ ಆಸ್ತಿ ವಿವಾದ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ, ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ- ಸಿಎಂ

ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ ಎಂದರು.

ಬೆಂಗಳೂರು: ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ. ಈ ಬಗ್ಗೆ ನಿನ್ನೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ ಎಂದರು.

ಯಾದಗಿರಿ, ಧಾರವಾಡ ಜಿಲ್ಲೆಯ ರೈತರಿಗೂ ಇದೇ ರೀತಿ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಒಂದು ವೇಳೆ ರೈತರಿಗೆ ನೋಟಿಸ್ ಜಾರಿ ಮಾಡಿದ್ದರೆ ವಾಪಸ್ ಪಡೆಯಲಾಗುವುದು, ‘ಕಂದಾಯ ಸಚಿವರಿಗೆ ಈ ಬಗ್ಗೆ ಪರಿಶೀಲಿಸುವಂತೆ ಹೇಳುತ್ತೇನೆ. ಯಾವುದೇ ರೈತರನ್ನು ಬೀದಿಪಾಲು ಮಾಡುವುದಿಲ್ಲ ಎಂದರು.

ಇನ್ನು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ, ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ ಎಂದು ತಿಳಿಸಿದ್ದಾರೆ.

1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಪ್ರತಿಪಕ್ಷದ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.

ಹೊನವಾಡ ಗ್ರಾಮದಲ್ಲಿ 1200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುದನ್ನು ತೆಗೆಸಿದ್ದಾರೆ. ಈ ಸಂಬಂಧ ಸರಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT