ಭೂಬಾಲನ್ 
ರಾಜ್ಯ

ವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ: ಜಿಲ್ಲಾಧಿಕಾರಿ ಸ್ಫೋಟಕ ಹೇಳಿಕೆ

ವಕ್ಫ್​ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ.

ವಿಜಯಪುರ: ವಿಜಯಪುರ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು ಬಿಜೆಪಿ ನಿಯೋಗ ಇಂದು ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ ಜಿಲ್ಲಾಧಿಕಾರಿ ಭೂಬಾಲನ್ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್ ಅವರು, ವಕ್ಫ್​ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ. ನೋಟಿಸ್ ಕೊಡದೆಯೂ ಇಂದೀಕರಣ ಆದ ಉದಾಹರಣೆ ಇವೆ ಎಂದು ಸ್ಪಷ್ಟಪಡಿಸಿದರು.

ಭೂ ಮಾಲೀಕರು ಹಾಗೂ ವಕ್ಫ್​ಗೆ ನಾವು ನೊಟೀಸ್ ಕೊಟ್ಟಿದ್ದೇವೆ. ನೋಟಿಸ್ ಕೊಟ್ಟ ತಕ್ಷಣ ಖಾತಾ ಬದಲಾವಣೆ ಆಗುವುದಿಲ್ಲ. ಇಬ್ಬರನ್ನೂ ಕರೆದು ವಿಚಾರಣೆ ನಡೆಸುತ್ತೇವೆ. ಕಾಲಂ ನಂ.9ರಲ್ಲಿ ಹಾಗೂ ಮಾಲೀಕತ್ವ ಜಾಗದಲ್ಲಿ ವಕ್ಫ್ ಹೆಸರು ಹಾಕಿಲ್ಲ. 44 ಆಸ್ತಿಗಳಿಗೆ ನೋಟಿಸ್ ಕೊಡದೆ ಇಂದೀಕರಣ ಮಾಡಿದ್ದೇವೆ. ಆದರೆ ಅವರ ಮಾಲೀಕತ್ವ ಬದಲಾಗಲ್ಲ. ಇಂಡಿ ತಹಶೀಲ್ದಾರ್ 41 ಖಾತೆಗಳಿಗೆ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. ಅದೆಲ್ಲವನ್ನು ಕ್ಯಾನ್ಸಲ್ ಮಾಡಿದ್ದೇವೆ. ನಾಳೆ ಪಹಣಿಯಿಂದ ವಕ್ಫ್​ ಹೆಸರು ಹೋಗಲಿದೆ ಎಂದರು.

ವಕ್ಫ್ ಸಚಿವರು ಭವಿಷ್ಯದಲ್ಲಿ ಇಂತಹ ಸಮಸ್ಯೆ ಆಗಬಾರದೆಂದು ಟಾಸ್ಕ್​ಫೋರ್ಸ್ ರಚನೆ ಮಾಡಿದ್ದಾರೆ. 250 ಎಕರೆ ಭೂಮಿಗೆ ನೋಟಿಸ್ ಕೊಡಲಾಗಿದೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಎರಡು ಮೂರು ವರ್ಷಗಳ ಹಾಗೂ ಅದಕ್ಕೂ‌ ಮುಂಚೆ ಆದ ಇಂದೀಕರಣ ಪ್ರಕರಣಗಳ ಕುರಿತು ಸರ್ಕಾರ ನೀಡುವ ಸೂಚನೆ ಪಾಲನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ