ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ, ಬೆಂಗಳೂರಿನತ್ತ ಪ್ರಯಾಣ

ಬಳ್ಳಾರಿ ಜೈಲಿನಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಟ ದರ್ಶನ್ ಅವರು 131 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ.

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಳೆದ 63 ದಿನಗಳಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ದರ್ಶನ್​ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಚಿಕಿತ್ಸೆಗಾಗಿ ದರ್ಶನ್​ ಪರ ವಕೀಲರು ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವೈದ್ಯರ ವರದಿ ಆಧರಿಸಿ​ 6 ವಾರಗಳ ಮಧ್ಯಂತರ ಜಾಮೀನಿ ನೀಡಿದೆ.

ಬಳ್ಳಾರಿ ಜೈಲಿನಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಟ ದರ್ಶನ್ ಅವರು ಒಟ್ಟು 131 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ. ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಬಂದಿದ್ದು, ಇದರಿಂದ ಅವರಿಗೆ ಬೆನ್ನು ನೋವು ತೀವ್ರವಾಗಿ ಉಲ್ಬಣಗೊಂಡಿದೆ ಎಂಬ ಲಕ್ಷಣಗಳು ಕಂಡುಬಂದವು.

ದರ್ಶನ್, ಜೈಲಿನ ಹೊರಗೆ ಕಾಯುತ್ತಿದ್ದ ಪತ್ನಿ ವಿಜಯಲಕ್ಷ್ಮೀ ಅವರ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಇಂದು ರಾತ್ರಿ ಬೆಂಗಳೂರು ತಲುಪಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ ಜೂನ್ 11 ರಂದು ದರ್ಶನ್ ಬಂಧನವಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ನಂತರ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದಲ್ಲಿ ಆತನ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ. ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT