ನಟ ದರ್ಶನ್ 
ರಾಜ್ಯ

Actor Darshan ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್: ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು; ಷರತ್ತು ಅನ್ವಯ!

ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಷರತ್ತುಗಳು ಅನ್ವಯ

ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಪ್ರತಿ ವಾರವೂ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ.

ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಹೇಳಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಹೇಳಿದೆ.

ಬೆನ್ನು ಹುರಿ ಸಮಸ್ಯೆಗೆ ದರ್ಶನ್ ಗೆ ಚಿಕಿತ್ಸೆ

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್​ರ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್​ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಅಲ್ಲದೆ ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್​ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ನಟ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ನಟ ದರ್ಶನ್, ಮೈಸೂರಿನಲ್ಲಿ ಶೂಟಿಂಗ್‌ ತೆರಳಿದ್ದ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು. ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು.

ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT