ಡಿ ಕೆ ಶಿವಕುಮಾರ್ 
ರಾಜ್ಯ

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ- ಡಿಕೆ ಶಿವಕುಮಾರ್

ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಆರು ವಾರಗಳ ಅವಧಿಗೆ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

47 ವರ್ಷದ ದರ್ಶನ್ ಅವರನ್ನು ಜೂನ್ 11 ರಂದು ಬಂಧಿಸಲಾಗಿದ್ದು, ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಗೌಡ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ, ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!