ಸಂಗ್ರಹ ಚಿತ್ರ 
ರಾಜ್ಯ

BMTC ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರ ಬಂಧನ

ಯಲಹಂಕ ಹಾಗೂ ಶಿವಾಜಿನಗರ ಮಾರ್ಗದ ಬಸ್‌ ಅನ್ನು ಸಂಜೆ 5.25ರ ಸುಮಾರಿಗೆ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್‌ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿತ್ತು.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನುಪ ದೇವರ ಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ನವೀನ್ (19) ಮತ್ತು ಕಾರ್ತಿಕ್ (27) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮದ್ಯದ ಅಮಲಿನಲ್ಲಿದ್ದ ನವೀನ್ ಮತ್ತು ಕಾರ್ತಿಕ್ ಬಿಎಂಟಿಸಿ ಬಸ್ ಚಾಲಕ ಗಗನ್ ಮತ್ತು ಕಂಡಕ್ಟರ್ ಶಿವಕುಮಾರ್ ಮೇಲೆ ಹಲ್ಲೆ ನಡೆಸಿದ್ದರು.

ಯಲಹಂಕ ಹಾಗೂ ಶಿವಾಜಿನಗರ ಮಾರ್ಗದ ಬಸ್‌ ಅನ್ನು ಸಂಜೆ 5.25ರ ಸುಮಾರಿಗೆ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್‌ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿತ್ತು. ಈ ವೇಳೆ ಅಲ್ಲಿಗೆ ವಾಹನದಲ್ಲಿ ಬಂದಿದ್ದ ಆರೋಪಿಗಳು, ಒಳ ಪ್ರವೇಶಿಸಿ ಗಗನ್​ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು. ಈ ವೇಳೆ ತಡೆಯಲು ಮುಂದಾದ ಶಿವಕುಮಾರ್ ಅವರನ್ನೂ ಸಹ ಬಸ್‌ನಿಂದ ಹೊರಗಡೆ ಎಳೆದು ಹಲ್ಲೆ ಮಾಡಿದ್ದರು. ಈ ಎಲ್ಲ ದೃಶ್ಯಗಳು ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ಪೊಲೀಸರು ಬುಧವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!