ಬೆಂಗಳೂರು: ಚುನಾವಣೆಗಾಗಿ ವಕ್ಫ್ ಭೂಮಿ ವಿಚಾರದಲ್ಲಿ ವಿರೋಧ ಪಕ್ಷ ಬಿಜೆಪಿ ನಾಯಕರು ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕಿಡಿಕಾರಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು.
ಬಿಜೆಪಿಯವರು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಸಮಸ್ಯೆ ಇಲ್ಲದಿದ್ದರೂ ಸಮಸ್ಯೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆಂದು ಹೇಳಿದರು.
ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿ, ಮಾತನಾಡಲು ಬೇರೆ ಯಾವುದೇ ವಿಷಯಗಳಿಲ್ಲದ ಕಾರಣ ವಿಜಯಪುರ ಜಿಲ್ಲೆಯ ರೈತರು ವಕ್ಫ್ ಭೂಮಿ ವಿಚಾರ ಕುರಿತು ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ. ಆದರೆ, ಸರ್ಕಾರ ಯಾವುದೇ ರೈತರ ಭೂಮಿಯನ್ನು ಕಸಿಯುವುದಿಲ್ಲ. ರೈತರಿಗೆ ನೀಡಿರುವ ನೋಟಿಸ್ ಗಳನ್ನು ಹಿಂಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಆಡಳಿತದಲ್ಲಿಯೂ ವಕ್ಫ್ ನಿಂದ ನೋಟಿಸ್ ನೀಡಲಾಗಿತ್ತು. ತಪ್ಪುಗಳನ್ನು ಸರಿಪಡಿಸುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದೇವೆ. ನಾವು ರೈತರ ಪರ ಇದ್ದೇವೆ ಅವರ ಹಕ್ಕುಗಳನ್ನು ರಕ್ಷಿಸುತ್ತೇವೆ. ಈಗಾಗಲೇ ಸಿಎಂ ಹಾಗೂ ಸಂಬಂಧಪಟ್ಟ ಸಚಿವರು ಸ್ಪಷ್ಟನೆ ನೀಡಿದ್ದಾರೆಂದು ಹೇಳಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ವಕ್ಫ್ ಬೋರ್ಡ್ ಜಿಲ್ಲಾಧಿಕಾರಿ ಮೂಲಕ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಹಿಂಪಡೆಯುವಂತೆ ಸಿಎಂ ಈಗಾಗಲೇ ಸೂಚಿಸಿದ್ದಾರೆ. ಸಿಎಂ ಸ್ಪಷ್ಟನೆ ನೀಡಿದ ನಂತರವೂ ಬಿಜೆಪಿ ನಾಯಕರು ವಿವಾದ ಸೃಷ್ಟಿಸುತ್ತಿದ್ದಾರೆಂದು ಹೇಳಿದರು.