ಹಾಸನಾಂಬೆ ದೇವಾಲಯ 
ರಾಜ್ಯ

ಹಾಸನಾಂಬೆ ದರ್ಶನ: ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ

ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಇಂದು ಗುರುವಾರ ಸಹ ಗಲಾಟೆ ಮುಂದುವರಿದಿದೆ. ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ.

ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ನಿನ್ನೆ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದರು.

ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಅವಕಾಶವಿದ್ದು, ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಿದ್ದಾರೆ. ನಿಯಂತ್ರಣ ಮಾಡಲಾಗದೆ ಸಿಬ್ಬಂದಿ ಪರದಾಡುವಂತಾಯಿತು. ಹೀಗಾಗಿ 1000 ರೂಪಾಯಿ ಮೊತ್ತ ನೇರ ದರ್ಶನದ ಟಿಕೆಟ್ ವಿತರಣೆ, ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಜತೆಗೆ, ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ ವಿಶೇಷ ಬಸ್​ಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT