ಎಚ್ ಡಿ ಕುಮಾರಸ್ವಾಮಿ ಸಾಂದರ್ಭಿಕ ಚಿತ್ರ 
ರಾಜ್ಯ

ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಯಲು ವಕ್ಫ್ ವಿವಾದ ಸೃಷ್ಟಿ: ಎಚ್ ಡಿ ಕುಮಾರಸ್ವಾಮಿ

ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿಹಾಕಲು ಒಂದಾದ ನಂತರ ಮತ್ತೊಂದು ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ಅದು ಎಲ್ಲಿ ಆರಂಭವಾಯಿತು? ಎಲ್ಲಾದಕ್ಕೂ ಸಮಯ ನೀಡ್ತಿರೋದು ಯಾರು?

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಸಲು ಕಾಂಗ್ರೆಸ್ ಸರ್ಕಾರ ವಕ್ಫ್ ವಿವಾದ ಸೃಷ್ಟಿಸಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ.ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.

ಚನ್ನಪಟ್ಟಣ ಉಪ ಚುನಾವಣಾ ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷಗಳನ್ನು ಟೀಕಿಸಿದ್ದರು. ವಕ್ಫ್ ಮಂಡಳಿ ವಿವಾದ ಹೇಗೆ ಬಂತು? ಅದು ಹೇಗೆ ಆರಂಭವಾಯಿತು ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾಯಕರು ಅಕ್ರಮಗಳಲ್ಲಿ ತೊಡಗಿದ್ದಾರೆ. ವಿಶೇಷವಾಗಿ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಯಲು ವಕ್ಫ್ ವಿವಾದ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿಹಾಕಲು ಒಂದಾದ ನಂತರ ಮತ್ತೊಂದು ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ಅದು ಎಲ್ಲಿ ಆರಂಭವಾಯಿತು? ಎಲ್ಲಾದಕ್ಕೂ ಸಮಯ ನೀಡ್ತಿರೋದು ಯಾರು? ಪ್ರತಿಪಕ್ಷಗಳಿಂದ ವಕ್ಪ್ ವಿವಾದ ಸೃಷ್ಟಿಯಾಗಿಲ್ಲ. ಅದನ್ನು ಪ್ರಾರಂಭಿಸಿದ್ದು ಕಾಂಗ್ರೆಸ್ ಸರ್ಕಾರ ಎಂದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ತಪ್ಪು ಮಾಡಿ, ಪ್ರತಿಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲು ಬಯಸುತ್ತೇನೆ ಎಂದು ಅವರು ಹೇಳಿದರು.

ಈ ಮಧ್ಯೆ ರೈತರ ಜಮೀನಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ನೀಡಿಕೆ ವಿಚಾರವಾಗಿ ನವೆಂಬರ್ 4 ರಿಂದ ರಾಜ್ಯಾದ್ಯಂತ ಆಂದೋಲನ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ರೈತರ ಭೂ ದಾಖಲೆಗಳನ್ನು ಬದಲಾಯಿಸಲು ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯ ಆಸ್ತಿ ಎಂದು ನಮೂದಿಸಲು ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರ ಒತ್ತಾಯಿಸುತ್ತಿರುವುದನ್ನು ಪಕ್ಷವು "ಬಹಿರಂಗಪಡಿಸುತ್ತದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT