ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

'ಶಕ್ತಿ' ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಡಿಕೆಶಿ

ಇಂದು ಕೆಪಿಸಿಸಿ ಕಚೇರಿಯಲ್ಲಿ ಶಕ್ತಿ ಯೋಜನೆ ಮರುಶೀಲನೆ ಬಗ್ಗೆ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ.

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಶಕ್ತಿ ಯೋಜನೆ ಮರುಶೀಲನೆ ಬಗ್ಗೆ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಯೋಜನೆ ನಿಲ್ಲಿಸುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದರು.

ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂದರು. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದರು.

ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಡಿಸಿಎಂ ತಿಳಿಸಿದರು.

ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!