ಕರ್ನಾಟಕ ಹೈಕೋರ್ಟ್ 
ರಾಜ್ಯ

ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ: ರಾಜ್ಯ ಸರ್ಕಾರ, MES ಗೆ ಹೈಕೋರ್ಟ್‌ ನೋಟಿಸ್‌

ಕನ್ನಡ ರಾಜ್ಯೋತ್ಸವಕ್ಕೆ ಸಾಂಸ್ಕೃತಿಕ ಮಹತ್ವವಿದ್ದರೂ, ಮಹಾರಾಷ್ಟ್ರ ಮೂಲದ ಮರಾಠಿ ಪರ ಸಂಘಟನೆಯಾದ ಎಂಇಎಸ್ ಎರಡು ದಶಕಗಳಿಂದ ಬೆಳಗಾವಿಯಲ್ಲಿ ನವೆಂಬರ್ 1ರಂದು ಕರಾಳ ದಿನಾಚರಣೆ ಮಾಡುತ್ತಿದೆ. ಸರ್ಕಾರ ಅನುಮತಿಸದಿದ್ದರೂ ಪ್ರತಿಭಟನೆ ನಡೆಸುವ ಉದ್ಧಟತನವನ್ನು ಎಂಇಎಸ್‌ ಪ್ರದರ್ಶಿಸುತ್ತಾ ಬಂದಿದೆ.

ಬೆಂಗಳೂರು: ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯು ಕರಾಳ ದಿನಾಚರಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಎಂಇಎಸ್‌ (ಮಹಾರಾಷ್ಟ್ರ ಏಕೀಕರಣ ಸಮಿತಿ)ಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ಬೆಳಗಾವಿ ಜಿಲ್ಲೆ ಹುಕ್ಕೇರಿಯ ಎಂ.ವಡಗಾಂವ್‌ನ ಮಲ್ಲಪ್ಪ ಛಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ನ್ಯಾಯಮೂರ್ತಿ ಕೆ.ಸೋಮಶೇಖರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಕನ್ನಡ ರಾಜ್ಯೋತ್ಸವಕ್ಕೆ ಸಾಂಸ್ಕೃತಿಕ ಮಹತ್ವವಿದ್ದರೂ, ಮಹಾರಾಷ್ಟ್ರ ಮೂಲದ ಮರಾಠಿ ಪರ ಸಂಘಟನೆಯಾದ ಎಂಇಎಸ್ ಎರಡು ದಶಕಗಳಿಂದ ಬೆಳಗಾವಿಯಲ್ಲಿ ನವೆಂಬರ್ 1ರಂದು ಕರಾಳ ದಿನಾಚರಣೆ ಮಾಡುತ್ತಿದೆ. ಸರ್ಕಾರ ಅನುಮತಿಸದಿದ್ದರೂ ಪ್ರತಿಭಟನೆ ನಡೆಸುವ ಉದ್ಧಟತನವನ್ನು ಎಂಇಎಸ್‌ ಪ್ರದರ್ಶಿಸುತ್ತಾ ಬಂದಿದೆ. ಇಂತಹವರ ವಿರುದ್ಧ ಪೊಲೀಸರು ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಿ ಕೈ ತೊಳೆದುಕೊಳ್ಳುತ್ತಿದ್ದಾರೆ. ಸರ್ಕಾರದ ಎಚ್ಚರಿಕೆಗೆ ಎಂಇಎಸ್‌ ಕಾರ್ಯಕರ್ತರು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಕಳೆದ 3-4 ವರ್ಷಗಳಿಂದ ದುರ್ವರ್ತನೆ ತೋರುತ್ತಿದ್ದಾರೆ. ಮಾರಕಾಸ್ತ್ರಗಳನ್ನು ಪ್ರತಿಭಟನೆಗೆ ಕೊಂಡೊಯ್ಯಲಾಗುತ್ತಿದೆ. ಎಂಇಎಸ್‌ ಅಧ್ಯಕ್ಷರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವದ ಬಳಿಕ ಮಾಧ್ಯಮಗಳ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅರ್ಜಿಯನ್ನು ಬಾಕಿ ಉಳಿಸಿ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಬೇಕು ಎಂದು ಕೋರಿದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲರು, ಹೈಕೋರ್ಟ್‌ನ ಸಮನ್ವಯ ಪೀಠವು ಕನ್ನಡ ರಾಜ್ಯೋತ್ಸವನ್ನು ನಿರಾತಂಕವಾಗಿ ನಡೆಸಲು ಸರ್ಕಾರ ಮತ್ತು ಪೊಲೀಸರು ಕ್ರಮಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ನಡೆದುಕೊಳ್ಳುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದೆ. ಈ ಆದೇಶದ ಅನ್ವಯ ಮುಚ್ಚಳಿಕೆ ನೀಡಲು ಸಿದ್ಧವಿದ್ದೇವೆ. ಹೀಗಾಗಿ, ಪಿಐಎಲ್‌ ಸಲ್ಲಿಸುವ ಸನ್ನಿವೇಶವೇ ಉದ್ಭವಿಸಿಲ್ಲ. ಪ್ರಚಾರಕ್ಕಾಗಿ ಪಿಐಎಲ್‌ ಸಲ್ಲಿಕೆ ಮಾಡಲಾಗಿದ್ದು, ಅದನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ಆಯುಕ್ತರು ಹಾಗೂ ಎಂಇಎಸ್‌ಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ನವೆಂಬರ್‌ 5ಕ್ಕೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT