ಸಂಗ್ರಹ ಚಿತ್ರ 
ರಾಜ್ಯ

MUDA case: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕೆಪಿಸಿಸಿ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ನೀಡಿದ್ದ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ ನೀಡಿದೆ.

ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್​​ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣದಲ್ಲಿ ರಾಷ್ಟ್ರಪತಿ ಕೂಡ ಮಧ್ಯಪ್ರವೇಶಿಸಿದಂತಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ. ಈ ವಿಚಾರದ ಬಗ್ಗೆ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

ಅಲ್ಲದೆ, ಅರ್ಜಿದಾರರು ಈ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ವಿಳಾಸದಾರರನ್ನು (ಯಾರಿಗೆ ಅರ್ಜಿಯನ್ನು ರವಾನಿಸಲಾಗಿದೆ) ನೇರವಾಗಿ ಸಂಪರ್ಕಿಸಲು ವಿನಂತಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ. ಅರ್ಜಿದಾರರು ತಮ್ಮ ಅರ್ಜಿ/ದೂರು ನೋಂದಾಯಿಸಲು https://helpline.rb.nic.in ಪೋರ್ಟಲ್ ಅನ್ನು ಬಳಸಬಹುದು ಎಂದೂ ಸಲಹೆ ನೀಡಿರುವುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT