ರೇಣುಕಾಸ್ವಾಮಿ ಕೊಲೆ ಆರೋಪಿಗಳು 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತನಿಖೆ ಅಂತಿಮ ಘಟ್ಟಕ್ಕೆ; ಇದೇ ವಾರ ದರ್ಶನ್‌ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್'ಶೀಟ್ ಸಲ್ಲಿಕೆ!

ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದ್ದು, ನಟ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದೆ. ಇದೇ ವಾರ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ದರ್ಶನ್ ಮತ್ತು ಅವರ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್‌ನಲ್ಲಿ ವಜಾ ಆಗಿದೆ.

ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತನಿಖಾ ತಂಡ ಕೆಲ ವಿಧಿವಿಜ್ಞಾನ ಮತ್ತು ತಾಂತ್ರಿಕ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ಆರು ಆರೋಪಿಗಳು ಧರಿಸಿದ್ದ ಬಟ್ಟೆ, ಪಾದರಕ್ಷೆಗಳು ಮತ್ತು ಚರ್ಮದ ವಸ್ತುಗಳನ್ನು ಅವರ ಬಂಧನದ ನಂತರ ಅವರ ಮನೆಗಳಿಂದ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು 200 ಕ್ಕೂ ಹೆಚ್ಚು ಪ್ರಮುಖ ಸಾಕ್ಷ್ಯಗಳ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ, ಇದು ಪ್ರಕರಣವನ್ನು ಮತ್ತಷ್ಟು ಬಲಪಡಿಸುತ್ತದೆ. ತೀವ್ರತರ ಗಾಯಗಳ ಪರಿಣಾಮವಾಗಿ ಆಘಾತ ಮತ್ತು ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆಂದು ಮರಣೋತ್ತರ ಪರೀಕ್ಷಾ ವರದಿ ದೃಢಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು. ಕೊಲೆಯಂತಹ ಘೋರ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿದ ನಂತರ ಪೊಲೀಸರು 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

LPG ಗ್ರಾಹಕರಿಗೆ ಕೇಂದ್ರದ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!

ಹಿಂದು ಧಾರ್ಮಿಕ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ? ಪ್ಯಾರಿಸ್‌ನ Eiffel Tower ಬಂದ್, ಭಾರೀ ವಿವಾದ..!

ಮೆಜೆಸ್ಟಿಕ್‌ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್‌ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?

ಕೂಲ್.. ಕೂಲ್.. ಬೆಂಗಳೂರಿಗೆ ಏನಾಯ್ತು..? ಸೆಪ್ಟೆಂಬರ್‌ನಲ್ಲೇ ಏಪ್ರಿಲ್‌ ತಿಂಗಳ ಬಿಸಿಲು; 32 ಡಿಗ್ರಿ ದಾಟಿದ ತಾಪಮಾನ, ಸಿಲಿಕಾನ್‌ ಸಿಟಿ ಜನತೆ ಹೈರಾಣ..!

ಸೆ.20 ರಿಂದ 108 ಸೇವೆ ಬಂದ್: ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್; 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!