ಆರೋಪಿ ವಿನಯ್ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್‌ ಪೊಲೀಸ್‌ ಭದ್ರತೆಯಲ್ಲಿ ಆರೋಪಿಯನ್ನು ಸ್ಥಳಾಂತರ ಮಾಡಲಾಗಿದೆ.

ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್'ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್‌ ಪೊಲೀಸ್‌ ಭದ್ರತೆಯಲ್ಲಿ ಆರೋಪಿಯನ್ನು ಸ್ಥಳಾಂತರ ಮಾಡಲಾಗಿದೆ. ಜೈಲಿಗೆ ಬಂದ ಬಳಿಕ ವಿನಯ್ ಆರೋಗ್ಯ ತಪಾಸಣೆ ಹಾಗೂ ಇತರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕೇಂದ್ರ ಕಾರಾಗೃಹದ ಒಳಗೆ ಕಾರಾಗೃಹ ಸಿಬ್ಬಂದಿ ಕರೆದೊಯ್ದರು.

ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯ್ ನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದ್ದು, ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ನನ್ನು ಬಂಧನಕ್ಕೊಳಪಡಿಸಲಾಗಿತ್ತು. ಅಪರಾಧ ನಡೆದ ಶೆಡ್ ವಿನಯ್ ಕುಟುಂಬಕ್ಕೆ ಸೇರಿದ್ದು ಎಂದು ತಿಳಿದುಬಂದಿತ್ತು.

ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಜೈಲು ಅಧೀಕ್ಷಕ ಡಾ.ಐ.ಜೆ.ಮ್ಯಾಗೇರಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

LPG ಗ್ರಾಹಕರಿಗೆ ಕೇಂದ್ರದ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!

ಹಿಂದು ಧಾರ್ಮಿಕ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ? ಪ್ಯಾರಿಸ್‌ನ Eiffel Tower ಬಂದ್, ಭಾರೀ ವಿವಾದ..!

ಮೆಜೆಸ್ಟಿಕ್‌ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್‌ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?

ಕೂಲ್.. ಕೂಲ್.. ಬೆಂಗಳೂರಿಗೆ ಏನಾಯ್ತು..? ಸೆಪ್ಟೆಂಬರ್‌ನಲ್ಲೇ ಏಪ್ರಿಲ್‌ ತಿಂಗಳ ಬಿಸಿಲು; 32 ಡಿಗ್ರಿ ದಾಟಿದ ತಾಪಮಾನ, ಸಿಲಿಕಾನ್‌ ಸಿಟಿ ಜನತೆ ಹೈರಾಣ..!

ಸೆ.20 ರಿಂದ 108 ಸೇವೆ ಬಂದ್: ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್; 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!