ಆಜಾನ್ ಸದ್ದು ಕೇಳಿ ಮೌನವಾಗಿ ನಿಂತ ಸಿಎಂ ಸಿದ್ದರಾಮಯ್ಯ  online desk
ರಾಜ್ಯ

ಆಜಾನ್ ಶಬ್ದ ಕೇಳಿ ಭಾಷಣ ನಿಲ್ಲಿಸಿದ ಸಿದ್ದರಾಮಯ್ಯ; ಮೌನವಾಗಿ ನಿಂತ ಸಿಎಂ!

ಸಿಎಂ ಸಿದ್ದರಾಮಯ್ಯ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಆಜಾನ್ ಸದ್ದು ಕೇಳಿಸಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಜಾನ್ ಕೇಳಿ ತಮ್ಮ ಭಾಷಣವನ್ನು ಅರ್ಧಕ್ಕೇ ನಿಲ್ಲಿಸಿದ ಘಟನೆ ಶಿವಾಜಿನಗರದಲ್ಲಿ ನಡೆದಿದೆ.

ಸಿಎಂ ಸಿದ್ದರಾಮಯ್ಯ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಕೂಗು ಕೇಳಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತ ಪ್ರಸಂಗದ ವಿಡಿಯೋ ವೈರಲ್ ಆಗತೊಡಗಿದೆ.

ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

​ಆಜಾನ್​ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದರು. ​ಆಜಾನ್ ಮುಗಿಯುತ್ತಿದ್ದಂತೆಯೇ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಮುಂದುವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT