ಬಂಧನ (ಸಂಗ್ರಹ ಚಿತ್ರ) online desk
ರಾಜ್ಯ

ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡುವುದಾಗಿ ಕೋಟ್ಯಂತರ ರು. ವಂಚನೆ: ಬೆಂಗಳೂರಿನಲ್ಲಿ ED ಯಿಂದ ನಾಲ್ವರ ಬಂಧನ

ಶಶಿ ಕುಮಾರ್ ಎಂ. ಸಚಿನ್ ಎಂ. ಕಿರಣ್ ಎಸ್.ಕೆ. ಎನ್ನುವವರನ್ನು ಆಗಸ್ಟ್ 15ರಂದು ಬಂಧಿಸಲಾಗಿದೆ. ಚರಣ್ ರಾಜ್ ಸಿ. ಎಂಬಾತನನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ ಎಂದು ಇ.ಡಿ ತಿಳಿಸಿದೆ.

ಬೆಂಗಳೂರು: ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ಸೈಬರ್‌ ಹೂಡಿಕೆ ವಂಚನೆ ಮಾಡುತ್ತಿದ್ದ ಬೆಂಗಳೂರಿನ ಓರ್ವ ಸೇರಿದಂತೆ ನಾಲ್ವರು ಆರೋಪಿಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ವಂಚನೆಯ ಉದ್ದೇಶದ ಸ್ಮಾರ್ಟ್‌ಫೋನ್‌ ಆ್ಯಪ್‌ಗಳನ್ನು ಬಳಸಿ, ಷೇರುಪೇಟೆಯಲ್ಲಿ ಹಣ ಹೂಡಿಕೆ ಮಾಡುವುದಾಗಿ ಜನರನ್ನು ಮೋಸಗೊಳಿಸಿದ ಆರೋಪದ ಅಡಿ ನಾಲ್ಕು ಮಂದಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಇವರನ್ನು ಬಂಧಿಸಲಾಗಿದೆ. ಶಶಿ ಕುಮಾರ್ ಎಂ. ಸಚಿನ್ ಎಂ. ಕಿರಣ್ ಎಸ್.ಕೆ. ಎನ್ನುವವರನ್ನು ಆಗಸ್ಟ್ 15ರಂದು ಬಂಧಿಸಲಾಗಿದೆ. ಚರಣ್ ರಾಜ್ ಸಿ. ಎಂಬಾತನನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ ಎಂದು ಇ.ಡಿ. ಪ್ರಕಟಣೆ ತಿಳಿಸಿದೆ.

ನಕಲಿ ಐಪಿಒ ಹಾಗೂ ಕೆಲವು ಷೇರುಗಳಲ್ಲಿ ಹೂಡಿಕೆ ಮಾಡಲು ಆರೋಪಿಗಳು ಸಾರ್ವಜನಿಕರನ್ನು ಪ‍್ರೇರೇಪಿಸುತ್ತಿದ್ದರು, ಅವರಿಂದ ಕೆಲವು ಶೆಲ್ ಕಂಪನಿಗಳ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು ಎಂದು ಇ.ಡಿ. ಹೇಳಿದೆ.ಸುಮಾರು 25 ಕೋಟಿ ರು ಗೂ ಹೆಚ್ಚಿನ ಹಣ ವಂಚಿಸಲಾಗಿದೆ ಎಂದು ತಿಳಿದ ಬಂದಿದೆ. ವಿವಿಧ ರಾಜ್ಯ ಪೊಲೀಸರು ದಾಖಲಿಸಿದ ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ತನಿಖೆ ನಡೆಸಿದೆ. "ಎಲ್ಲಾ ನಾಲ್ವರು ಆರೋಪಿಗಳು ಕಂಪನಿಗಳ ಸಂಯೋಜನೆ ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವಲ್ಲಿ ತೊಡಗಿಸಿಕೊಂಡಿದ್ದಾರೆ, ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್ ಅಕೌಂಟ್ ತೆರೆದಿದ್ದರು. ಹಣ ವರ್ಗಾವಣೆ ಆದ ನಂತರ ಬೇರೆ ಬೇರೆ ಅಕೌಂಟ್‌ಗೆ ಟ್ರಾನ್ಸ್‌ಫರ್‌ ಮಾಡಿಕೊಳ್ಳುತ್ತಿದ್ದರು. ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡುತ್ತಿದ್ದರು. ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹತ್ತಾರು ದೂರು ದಾಖಲಾಗಿದ್ದವು.ಕೋಟ್ಯಂತರ ರೂಪಾಯಿ ಬೇನಾಮಿ ಹಣ ಟ್ರಾನ್ಸ್‌ಫರ್ ಆಗಿದ್ದ ಹಿನ್ನೆಲೆ ಇಡಿ ಅಧಿಕಾರಿಗಳಿಗೆ ಸೈಬರ್‌ ಕ್ರೈಂ ಪೊಲೀಸರು ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ನಾಲ್ವರನ್ನು ಬಂಧಿಸಿ, ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಬಂಧಿತ ಆರೋಪಿಗಳನ್ನು ವಿಶೇಷ ನ್ಯಾಯಾಲಯ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, ಬೆಂಗಳೂರು ಅವರನ್ನು ಏಳು ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ. ಇಡಿ ಪ್ರಕಾರ, ಇದುವರೆಗೆ ವಿವಿಧ ಪ್ರದೇಶಗಳಲ್ಲಿ 13 ಕಡೆ ಶೋಧ ನಡೆಸಿ, ಮೊಬೈಲ್ ಫೋನ್‌ಗಳು ಮತ್ತು ಇತರ ಡಿಜಿಟಲ್ ಸಾಧನಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದೆ. ಫರಿದಾಬಾದ್‌ನಲ್ಲಿ ಸಂತ್ರಸ್ತ ಮಹಿಳೆಗೆ ನಕಲಿ ಆಪ್‌ಗಳ ಮೂಲಕ ಷೇರುಗಳಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸುವ ಮೂಲಕ ವಂಚಕರು ರೂ 7.59 ಕೋಟಿ ವಂಚಿಸಿದ್ದಾರೆ ಎಂದು ಇಡಿ ಹೇಳಿದ್ದಾರೆ.

ನೋಯ್ಡಾದಲ್ಲಿ, GFSL ಸೆಕ್ಯುರಿಟೀಸ್ ಅಧಿಕೃತ ಸ್ಟಾಕ್ C 80 ಎಂಬ ಹೆಸರಿನ WhatsApp ಗುಂಪಿಗೆ ಸೇರಿಸಿದ ವಂಚಕರು ಉದ್ಯಮಿಯೊಬ್ಬರಿಂದ 9.09 ಕೋಟಿ ರೂ.ಗಳನ್ನು ವಂಚಿಸಿದ್ದಾರೆ. ಆಪ್ ಅನ್ನು ಡೌನ್‌ಲೋಡ್ ಮಾಡಲು ಪ್ರೇರೇಪಿಸಲಾಯಿತು ಮತ್ತು ಒದಗಿಸಲಾದ ವಿವಿಧ ಬ್ಯಾಂಕ್ ಖಾತೆಗಳಿಗೆ 9.09 ಕೋಟಿ ರೂ. ವರ್ಗಾಯಿಸವಂತೆ ಸೂಚಿಸಿದ್ದಾರೆ. ಇದೇ ರೀತಿ ಹಲವು ವ್ಯಕ್ತಿಗಳಿಗೆ ಕೋಟ್ಯಂತರು ರೂಪಾಯಿ ಹಣ ವಂಚಿಸಿದ್ದಾರೆ.

"ಥಾಯ್ಲೆಂಡ್, ಲಾವೋಸ್ ಮತ್ತು ಮ್ಯಾನ್ಮಾರ್ನಲ್ಲಿರುವ ಗೋಲ್ಡನ್ ಟ್ರಯಾಂಗಲ್, ಮಾದಕವಸ್ತು ಕಳ್ಳಸಾಗಣೆ ಮತ್ತು ಮಾನವ ಕಳ್ಳಸಾಗಣೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಬಹಳ ಹಿಂದಿನಿಂದಲೂ ಹೆಸರುವಾಸಿಯಾಗಿದೆ. ಉದ್ಯೋಗದ ಆಫರ್‌ಗಳ ನೆಪದಲ್ಲಿ ಭಾರತೀಯ ನಾಗರಿಕರಿಗೆ ಆಮಿಷವೊಡ್ಡಲಾಗುತ್ತದೆ, ಗೋಲ್ಡನ್ ಟ್ರಯಾಂಗಲ್‌ಗೆ ಕಳ್ಳಸಾಗಣೆ ಮಾಡಲಾಗು್ತದೆ ಮತ್ತು ಸೈಬರ್ ವಂಚನೆ ಕಾರ್ಯಾಚರಣೆಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT