ಸಚಿವ ಜಮೀರ್‌ ಅಹ್ಮದ್‌ಖಾನ್‌ 
ರಾಜ್ಯ

ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದು, ನನ್ನ ಹೆಸರು ತಳುಕು ಹಾಕುವುದು ಬೇಡ: ಸಚಿವ Zameer Ahmed Khan

'ದರ್ಶನ್‌ ನನ್ನ ಆತ್ಮೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, 'ದರ್ಶನ್‌ ನನ್ನ ಆತ್ಮೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಜಮೀರ್‌ ಅಹಮದ್‌ ಖಾನ್‌ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ ರೌಡಿಶೀಟರ್‌ಗಳ ಜೊತೆ ಸೇರಿ ರಾಜಾತಿಥ್ಯ ಪಡೆದುಕೊಂಡು ಫೋಟೊಗಳು ವೈರಲ್‌ ಆಗಿದ್ದವು. ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಬೆಳಗಾವಿ ಅಥವಾ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಚರ್ಚೆಗಳು ನಡೆದಾಗ ಅಂತಿಮವಾಗಿ ಬಳ್ಳಾರಿಗೆ ಸ್ಥಳಾಂತರಿಸಲಾಯಿತು.

ಜೈಲು ಬದಲಾವಣೆಯಲ್ಲಿ ನನ್ನ ಪಾತ್ರವಿಲ್ಲ

ಜೈಲು ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್‌, ನನಗೂ, ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುವ ಜೊತೆಗೆ ತಪ್ಪು ಮಾಡಿರುವುದಕ್ಕೆ ಜೈಲಿಗೆ ಹೋಗಿದ್ದಾರೆ, ಸುಮ್ಮನೇ ಯಾರೂ ಬಂಧನಕ್ಕೊಳಗಾಗುವುದಿಲ್ಲ ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್