ಫ್ಲೈಓವರ್​ನಿಂದ ಕೆಳಗೆ ಬಿದ್ದಿರುವ ಕಾರು. 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಮಂಗಳವಾರ ಸಂಭವಿಸಿದೆ.

ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದೆ. ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ಸೇಲಂನ ಶಬರೀಶ್(29) ಎಂದು ಗುರ್ತಿಸಲಾಗಿದ್ದು, ಗಾಯಾಳುಗಳನ್ನು ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಮಂಜುನಾಥ್ ಎಂದು ಗುರ್ತಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.

ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು, ಮೊದಲಪ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್​​​​​ನಿಂದ ಹಾರಿ ಕೆಳಗೆ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!