ಎಚ್ ಸಿ ಮಹದೇವಪ್ಪ 
ರಾಜ್ಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೀದರ್‌ನಿಂದ ಚಾಮರಾಜನಗರ ವರೆಗೆ ಮಾನವ ಸರಪಳಿ ನಿರ್ಮಾಣ

ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಸಂಪರ್ಕಿಸುವ, ಸುಮಾರು 2,500 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಇದು ವಿಶ್ವದಲ್ಲಿಯೇ ಅತಿ ಉದ್ದದ ಮಾನವ ಸರಪಳಿಯಾಗಲಿದೆ ಎಂದಿದ್ದಾರೆ.

ಬೆಂಗಳೂರು: ಇದೇ ಸೆಪ್ಟೆಂಬರ್ 15 ರಂದು ವಿಶ್ವಸಂಸ್ಥೆಯ ಘೋಷಿತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಬೀದರ್‌ನಿಂದ ಚಾಮರಾಜನಗರದವರೆಗೆ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪ್ರಜಾಸತ್ತಾತ್ಮಕ ತತ್ವಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಕಡೆಗೆ ಕರ್ನಾಟಕದ ನಿರಂತರ ಬದ್ಧತೆಗೆ ಪ್ರದರ್ಶಿಸಲು ಬೀದರ್​ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಹೇಳಿದ್ದಾರೆ.

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿ ನಿರ್ಮಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಸಂಪರ್ಕಿಸುವ, ಸುಮಾರು 2,500 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಇದು ವಿಶ್ವದಲ್ಲಿಯೇ ಅತಿ ಉದ್ದದ ಮಾನವ ಸರಪಳಿಯಾಗಲಿದೆ ಎಂದಿದ್ದಾರೆ.

ಪ್ರತಿ ಕಿಲೋಮೀಟರ್‌ಗೆ ಸರಾಸರಿ 1,000 ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸುಮಾರು 25 ಲಕ್ಷ ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮಾನವ ಸರಪಳಿಯಲ್ಲಿ ಭಾಗವಹಿಸುವವರು ಪ್ರಜಾಪ್ರಭುತ್ವದ ಅಡಿಯಲ್ಲಿರುವ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಪ್ರದರ್ಶಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ ಎಂದರು.

ಮಾನವ ಸರಪಳಿಯಲ್ಲಿ ಭಾಗವಹಿಸುವವರಿಂದ ರಾಜ್ಯಾದ್ಯಂತ 10 ಲಕ್ಷ ಸಸಿಗಳನ್ನು ನೆಡಲು ನಾವು ಯೋಜಿಸುತ್ತಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಕಳೆದ ವರ್ಷ ಕರ್ನಾಟಕವು ಭಾರತದ ಸಂವಿಧಾನದ ಪೀಠಿಕೆಯನ್ನು ಪಠಿಸುವ ಮೂಲಕ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಿದ್ದರು ಮತ್ತು ಸಮಾಜ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!