ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ 
ರಾಜ್ಯ

ಪ್ರಥಮ ಬಾರಿ 4 ಬೆಳೆಗೆ ಬೆಂಬಲ ಬೆಲೆ: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲ- ಶಿವಾನಂದ ಪಾಟೀಲ

ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರು ಕಾಳು ಖರೀದಿ ಮಾಡಲಿದೆ.

ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಶುಕ್ರವಾರ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರು ಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಗುರುವಾರ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರು ಕಾಳು ಖರೀದಿ ಮಾಡಲಿದೆ. ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್ ಕ್ವಿಂಟಲ್ ಗೆ ರೂ 4,892 ಹಾಗೂ ಉದ್ದಿನ ಕಾಳಿಗೆ ಕ್ವಿಂಟಲ್ ಗೆ ರೂ 7,400 ಬೆಲೆ ನಿಗದಿಪಡಿಸಲಾಗಿದೆ ಎಂದರು.

ಬೆಂಬಲ ಬೆಲೆಯಲ್ಲಿ ಸುಮಾರು 10 ಲಕ್ಷ ಕ್ವಿಂಟಲ್ ಸೋಯಾಬಿನ್ ಮತ್ತು 2 ಲಕ್ಷ ಕ್ವಿಂಟಲ್ ಉದ್ದಿನಕಾಳು ಖರೀದಿ ಮಾಡಲಾಗುವುದು. 2024-25ನೇ ಸಾಲಿನಲ್ಲಿ 4.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್ ಹಾಗೂ 0.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.40 ಲಕ್ಷ ಮೆಟ್ರಿಕ್ ಟನ್ ಉದ್ದಿನಕಾಳು ಇಳುವರಿ ನಿರೀಕ್ಷೆ ಮಾಡಲಾಗಿತ್ತು ಎಂದು ತಿಳಿಸಿದರು.

ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ ಗೆ ರೂ 8,682 ರೂ. ಹಾಗೂ ಸೂರ್ಯಕಾಂತಿಗೆ ರೂ 7,280 ನಿಗದಿಪಡಿಸಲಾಗಿದೆ. ಹೆಸರುಕಾಳು ಖರೀದಿಗೆ 172 ಖರೀದಿ ಕೇಂದ್ರ ಗುರುತಿಸಲಾಗಿದ್ದು, 1982 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಸೂರ್ಯಕಾಂತಿ ಖರೀದಿಗೆ 19 ಖರೀದಿ ಕೇಂದ್ರ ಗುರುತಿಸಲಾಗಿದ್ದು, 461 ರೈತರು ನೋಂದಣಿ ಮಾಡಿಕೊಂಡಿದ್ದಾರೆ‌. ಕೊಬ್ಬರಿ ಖರೀದಿಯಲ್ಲೂ ಈ ಬಾರಿ ಪ್ರಮುಖ ಪಾತ್ರ ವಹಿಸಲಾಗಿದ್ದು, ಇದೇ ಮೊದಲ ಬಾರಿಗೆ ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಯಾರ್ಡ್ ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 14ರಿಂದ 15 ಶೀಥಲ ಗೃಹಗಳನ್ನು ಎಪಿಎಂಸಿಗಳಲ್ಲಿ ನಿರ್ಮಾಣ ಮಾಡಲಾಗುವುದು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿಭಾಗಾವಾರು ಜಾಗೃತ ಘಟಕಗಳನ್ನು ರಚಿಸಲಾಗಿದೆ. ಇದರಿಂದ ಎಪಿಎಂಸಿ ಆದಾಯ ಕೂಡ ಹೆಚ್ಚಾಗಿದೆ, ಈ ವರ್ಷ ರೂ 380ರಿಂದ ರೂ 400 ಕೋಟಿ ಆದಾಯ ನಿರೀಕ್ಷೆ ಮಾಡಲಾಗಿದ್ದು, ಆರ್ಥಿಕ ವರ್ಷದ 5 ತಿಂಗಳಲ್ಲಿ ರೂ 133.15 ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 77.42 ಕೋಟಿ ಆದಾಯ ಸಂಗ್ರಹವಾಗಿತ್ತು ಎಂದು ಸಚಿವರು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!