ಬಿಬಿಎಂಪಿ 
ರಾಜ್ಯ

TNIE ವರದಿ ಫಲಶ್ರುತಿ: ಕಟ್ಟಡದ 5 ಅನಧಿಕೃತ ಮಹಡಿ ತೆರವಿಗೆ BBMP ಮುಂದು

ಕಟ್ಟಡ ಅನುಮತಿ ವೇಳೆ ರಮೇಶ್ ಬಾಬು ಅವರು 8 ಅಂತಸ್ತಿನ ಕಟ್ಟಡ ನಿರ್ಮಿಸುವುದಾಗಿ ಹೇಳಿದ್ದು, 10 ಅಂತಸ್ತಿನ ಕಟ್ಟಡ ನಿರ್ಮಿಸಿದ್ದಾರೆ.

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ (The New Indian express newspaper) ಬೆಂಗಳೂರು ಆವೃತ್ತಿಯಲ್ಲಿ ವರದಿ ಬಳಿಕ ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಬಿಜೆಪಿ ನಾಯಕನಿಗೆ ಸೇರಿದ ಕಟ್ಟಡವೊಂದರ 5 ಅನಧಿಕೃತ ಮಹಡಿಗಳನ್ನು ತೆರವುಗೊಳಿಸಲು ಮುಂದಾಗಿದೆ.

ಜುಲೈ.23 ರಂದು 'BBMP engineers help BJP leader put up unauthorised floors in Bengaluru' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು. ವರದಿ ಬೆನ್ನಲ್ಲೇ ಬಿಬಿಎಂಪಿ ಮುಖ್ಯ ಆಯುಕ್ತರು ವಿಲ್ಸನ್ ಗಾರ್ಡನ್‌ನ ಎಂಜಿನಿಯರ್‌ಗಳು ಮತ್ತು ದಕ್ಷಿಣ ವಲಯ ಆಯುಕ್ತ ವಿನೋದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸುವಂತೆ ಸೂಚಿಸಿದ್ದಾರೆ.

ಸೂಚನೆ ಬೆನ್ನಲ್ಲೇ ಇಂಜಿನಿಯರ್‌ಗಳು ಸೆ.11ಕ್ಕೆ ಅನಧಿಕೃತ ಮಹಡಿಗಳನ್ನು ಕೆಡವಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗೇಂದ್ರ ಅವರು ಮಾತನಾಡಿ, ಬಿಬಿಎಂಪಿ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಬಿಜೆಪಿ ಮುಖಂಡ ರಮೇಶ್ ಬಾಬು ಅವರಿಗೆ ಸೇರಿದ ಕಟ್ಟಡದಲ್ಲಿ ಅನಧಿಕೃತ ಮಹಡಿಗಳ ನೆಲಸಮಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಟ್ಟಡ ಅನುಮತಿ ವೇಳೆ ರಮೇಶ್ ಬಾಬು ಅವರು 8 ಅಂತಸ್ತಿನ ಕಟ್ಟಡ ನಿರ್ಮಿಸುವುದಾಗಿ ಹೇಳಿದ್ದು, 10 ಅಂತಸ್ತಿನ ಕಟ್ಟಡ ನಿರ್ಮಿಸಿದ್ದಾರೆ. ಈ ವಿಚಾರ ಚಿಕ್ಕಪೇಟೆ ಉಪವಿಭಾಗದ ಕಾರ್ಯಪಾಲಕ ಇಂಜಿನಿಯರ್ ಈರಪ್ಪ ರೆಡ್ಡಿ ಮತ್ತು ಅವರ ಅಧೀನದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿದಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT