ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಶನಿವಾರ ನಡೆದಿದೆ.

ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆಟೋದಲ್ಲಿದ್ದ ಇನ್ನಿತರ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರವಾದ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ