ಸಂಸದ ಸುಧಾಕರ್ ಹಾಗೂ ಡಿಕೆ.ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ಎತ್ತಿನಹೊಳೆ ಯೋಜನೆ ಪೂರ್ಣಗೊಂಡರೆ ಡಿಕೆಶಿ ಬಯಲು ಸೀಮೆ ಭಗೀರಥ ಎಂದು ಘೋಷಣೆ: ಬಿಜೆಪಿ ಸವಾಲಿಗೆ 'ಸೈ' ಎಂದ DCM

ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ.

ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಭಗೀರಥ ಎಂದು ನಾನೇ ಘೋಷಿಸುವೆ ಎಂಬ ಸಂಸದ ಡಾ.ಕೆ.ಸುಧಾಕರ್ ಅವರ ಸವಾಲನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಸ್ವೀಕರಿಸಿದ್ದಾರೆ.

ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದು ಹೇಳಿದರು.

ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ ಎಂದು ತಿಳಿಸಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಅನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದರು.

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಹೊಗಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನನಗೆ ಕೋವಿಡ್ ವರದಿಯ ಬಗ್ಗೆ ಏನೂ ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ ಎಂದರು.

ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT