ಸಿಂಗಾಪುರದ ನಿಯೋಗದೊಂದಿಗೆ ಎಂಬಿ ಪಾಟೀಲ್ 
ರಾಜ್ಯ

ಸಿಂಗಪುರ ಉದ್ಯಮಿಗಳ ಹೂಡಿಕೆಗೆ ಮುಕ್ತ ಸ್ವಾಗತ: ಎಂ.ಬಿ ಪಾಟೀಲ್

2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಭಾಗವಹಿಸಲು ಸಿಂಗಪುರದ ಉದ್ದಿಮೆಗಳನ್ನು ಆಹ್ವಾನಿಸಿದರು.

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸೋಮವಾರ ತಮ್ಮನ್ನು ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಭಾಗವಹಿಸಲು ಸಿಂಗಪುರದ ಉದ್ದಿಮೆಗಳನ್ನು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರ್ಕಾರ ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT