ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ ರೈಲು!

ರೈಲು ಸಂಖ್ಯೆ (07333) ಸೆಪ್ಟೆಂಬರ್ 13 ರಂದು ಬೆಳಿಗ್ಗೆ 06:55 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45 ಕ್ಕೆ ಕೊಚುವೇಲಿ ತಲುಪಲಿದೆ.

Nagaraja AB
Updated On : 10 Sept 2024, 6:05 pm

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸಲು ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಗೆ ನೈಋತ್ಯ ರೈಲ್ವೆ ನಿರ್ಧರಿಸಿದೆ.

ರೈಲು ಸಂಖ್ಯೆ (07333) ಸೆಪ್ಟೆಂಬರ್ 13 ರಂದು ಬೆಳಿಗ್ಗೆ 06:55 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45 ಕ್ಕೆ ಕೊಚುವೇಲಿ ತಲುಪಲಿದೆ.

ರೈಲು ಸಂಖ್ಯೆ (07334) ಸೆಪ್ಟೆಂಬರ್ 14 ರಂದು ಮಧ್ಯಾಹ್ನ 12:50 ಗಂಟೆಗೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

Advertisement

Advertisement

ಈ ರೈಲು ಎರಡೂ ದಿಕ್ಕುಗಳಲ್ಲಿ ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

Also Read

Bengaluru Cantonment station: ಎರಡು ಪ್ಲಾಟ್‌ಫಾರ್ಮ್‌ 92 ದಿನ ಬಂದ್; 44 ರೈಲುಗಳ ನಿಲುಗಡೆ ರದ್ದು!

ಈ ವಿಶೇಷ ರೈಲಿನಲ್ಲಿ ಎರಡು ಎಸಿ-2 ಟೈಯರ್, ನಾಲ್ಕು ಎಸಿ -3 ಟೈಯರ್, ಹತ್ತು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ಎಸ್ಎಲ್ಆರ್ , ಡಿ ಬೋಗಿಗಳು ಸೇರಿದಂತೆ ಒಟ್ಟು 20 ಬೋಗಿಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement