ಬೆಂಕಿಗೆ ಭಸ್ಮವಾದ ಶೋರೂಂ  
ರಾಜ್ಯ

ಕಲಬುರಗಿ: ರಿಪೇರಿ ಸರಿಯಾಗಿ ಮಾಡಿಲ್ಲದ ಆರೋಪ; ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹಚ್ಚಿದ ಭೂಪ!

ಆರಂಭದಲ್ಲಿ ಎಲ್ಲರೂ ಶಾಟ್೯ ಸಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದುಕೊಂಡಿದ್ದರು. ಆದರೆ ಪೊಲೀಸರು ಇದು ಕುಕೃತ್ಯ ಎಂದು ತನಿಖೆ ವೇಳೆ ಪತ್ತೆಹಚ್ಚಿರುವುದಾಗಿ ತಿಳಿದುಬಂದಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಹುಮನಾಬಾದ್ ರಸ್ತೆಯ ಎಲೆಕ್ಟ್ರಿಕ್ ಬೈಕ್ ಶೋ ರೂಂನಲ್ಲಿ ಬೆಂಕಿ ಹತ್ತಿ ಉರಿದಿದ್ದು, ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಸಿಟ್ಟಿನಿಂದ 26 ವರ್ಷದ ಯುವಕ ಬೆಂಕಿ ಹಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ.

ಮೊಹಮ್ಮದ್ ನದೀಮ್ ಪೆಟ್ರೋಲ್‌ನೊಂದಿಗೆ ಶೋರೂಮ್‌ಗೆ ಪ್ರವೇಶಿಸಿ ಮಂಗಳವಾರ ಸುಮಾರು ಆರು ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾನೆ ಮತ್ತು ಶೀಘ್ರದಲ್ಲೇ ಬೆಂಕಿ ಇಡೀ ಔಟ್‌ಲೆಟ್‌ಗೆ ವ್ಯಾಪಿಸಿತು.

ಆರಂಭದಲ್ಲಿ ಎಲ್ಲರೂ ಶಾಟ್೯ ಸಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದುಕೊಂಡಿದ್ದರು. ಆದರೆ ಪೊಲೀಸರು ಇದು ಕುಕೃತ್ಯ ಎಂದು ತನಿಖೆ ವೇಳೆ ಪತ್ತೆಹಚ್ಚಿರುವುದಾಗಿ ತಿಳಿದುಬಂದಿದೆ.

ನಡೆದ ಘಟನೆಯೇನು?: ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಮ್ಮದ್ ನದೀಮ್ ಆಗಸ್ಟ್‌ನಲ್ಲಿ ಶೋರೂಮ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿಸಿದ್ದರು. ಬೈಕ್ ನಲ್ಲಿ ಸಮಸ್ಯೆಗಳು ಕಾಣಿಸಿಕೊಂಡದ್ದರಿಂದ, ಅವರು ಶೋರೂಂ ಸಿಬ್ಬಂದಿಯನ್ನು ಹಲವು ಬಾರಿ ಸಂಪರ್ಕಿಸಿದರು. ಆದರೆ ಅಲ್ಲಿನ ಸಿಬ್ಬಂದಿಗಳು ಇವರ ಸಮಸ್ಯೆಗೆ ಸರಿಯಾಗಿ ಸ್ಪಂದಿಸಲಿಲ್ಲ ಮತ್ತು ಅವರ ವಿನಂತಿಗಳನ್ನು ನಿರ್ಲಕ್ಷಿಸಿದರು.

ಇದು ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. ತನ್ನ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ ವಾಗ್ವಾದ ಮಾಡಿ ಬಳಿಕ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿದ್ದು ಸಿಸಿಟಿವಿಯಲ್ಲಿ ದಾಖಲಾಗಿದೆ. ಘಟನೆ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಘಟನೆಯಲ್ಲಿ 6 ಹೊಸ ಎಲೆಕ್ಟ್ರಿಕ್ ಬೈಕ್​ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕೇವಲ 20 ದಿನದ ಹಿಂದೆ ಓಲಾ ಕಂಪನಿಯ ಸ್ಕೂಟರ್ ಖರೀದಿಸಿದ್ದ ಆರೋಪಿಯ ಬೈಕ್ ಪದೇಪದೇ ರಿಪೇರಿಗೆ ಬರುತ್ತಿದೆ ಎಂದು ಸಿಟ್ಟಾಗಿದ್ದ. ಸಾಕಷ್ಟು ಬಾರಿ ಶೋರೂಂಗೆ ಬಂದು ಸರಿಪಡಿಸಿಕೊಡುವಂತೆ ಮನವಿ ಮಾಡಿದ್ದ. ಆದರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದು ಇದರಿಂದ ಬೇಸತ್ತು ನಿನ್ನೆ ಶೋ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT