ಕೇಂದ್ರ ಸಚಿವರ ಭೇಟಿಯಾದ ಸಚಿವ ಎಂಬಿ ಪಾಟೀಲ್. 
ರಾಜ್ಯ

ಮೂವರು ಕೇಂದ್ರ ಸಚಿವರ ಭೇಟಿಯಾದ ಸಚಿವ ಎಂ.ಬಿ ಪಾಟೀಲ್: ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಎಂಬಿ ಪಾಟೀಲ್ ರಾಜ್ಯದ ಅಭಿವೃದ್ಧಿ ಕುರಿತು ಸಹಕಾರ ಕೋರಿದರು.

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಗೆ ಮಂಗಳವಾರ ಭೇಟಿ ನೀಡಿರುವ ಸಚಿವ ಎಂಬಿ.ಪಾಟೀಲ್ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಎಂಬಿ ಪಾಟೀಲ್ ರಾಜ್ಯದ ಅಭಿವೃದ್ಧಿ ಕುರಿತು ಸಹಕಾರ ಕೋರಿದರು.

2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ಇದರಂತೆ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆ, ರಾಜ್ಯದಲ್ಲಿರುವ ಬಿಎಚ್ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವು ಕುರಿತು ಚರ್ಚೆ ನಡೆಸಿದ್ದಾರೆ.

ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗಿನ ಭೇಟಿ ವೇಳೆ, ರಾಜ್ಯದ ಕೈಗಾರಿಕಾ ಯೋಜನೆಗಳು, ಸೆಮಿಕಂಡಕ್ಟರ್ ವಲಯ, ಹೈಟೆಕ್-ಉತ್ಪಾದನಾ ಘಟಕಗಳು, ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ.

ಅಲ್ಲದೆ, ಇ.ವಿ. ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಫೇಮ್-3 ಯೋಜನೆಯ ಜಾರಿಯಲ್ಲಿ ಆಗುತ್ತಿರುವ ವಿಳಂಬ, ರಕ್ಷಣಾ ತಂತ್ರಜ್ಞಾನ ಹಬ್ ಗಳ ಸ್ಥಾಪನೆ, ಬೆಂಗಳೂರು ಗ್ರಾಮಾಂತರದಲ್ಲಿ ಇಎಂಸಿ ಕ್ಲಸ್ಟರ್ ಸ್ಥಾಪನೆಗೆ ಬಾಕಿ ಇರುವ ಅನುಮೋದನೆ, ಹಾರೋಹಳ್ಳಿ, ಕುಡುತಿನಿ ಮತ್ತು ದೇವಕತ್ತಿಕೊಪ್ಪದಲ್ಲಿ ಕೈಗಾರಿಕಾ ಯೋಜನೆಗಳಿಗೆ ಬಾಕಿ ಇರುವ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ, ಸೆಮಿಕಂಡಕ್ಟರ್ ಕಂಪನಿ ಸ್ಥಾಪನೆಯ ತುರ್ತು ಮತ್ತು ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕವನ್ನು ಹೊರಗಿಟ್ಟಿರುವುದರ ಬಗ್ಗೆ ಮಾತುಕತೆ ನಡೆಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪಾಟೀಲ್ ಅವರು, ಬೇಗನೆ ಹಾಳಾಗುವಂತಹ ಪದಾರ್ಥಗಳನ್ನು ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್ಟಿ ತೆರಿಗೆಯನ್ನು ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರೀ ಆಮದು ತೆರಿಗೆ ಮತ್ತು ಸುಂಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT