ಸಿಎಂ ಸಿದ್ದರಾಮಯ್ಯ 
ರಾಜ್ಯ

'ಮುಡಾ' ಅಸ್ತ್ರಕ್ಕೆ ಪ್ರತ್ಯಸ್ತ್ರ ಸಿದ್ದ: BJP ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕು; ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಮುಡಾ ಹಗರಣವನ್ನು ಸಿದ್ದರಾಮಯ್ಯ ತಲೆಗೆಕಟ್ಟಿ ಅಧಿಕಾರದಿಂದ ಕೆಳಗಿಳಿಸಬೇಕು ಎನ್ನುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕು ಬಹುದೊಡ್ಡ ಖೆಡ್ಡಾ ಹೂಡಿದ್ದಾರೆ.

ಮುಡಾ ಪ್ರಕರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಹಲವು ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರ ಭ್ರಷ್ಟಾಚಾರದ ಪ್ರಕರಣಗಳ ಮೇಲೆ ಬೆಳಕು ಚೆಲ್ಲಿ, ಕಾನೂನು ಕುಣಿಕೆಗೆ ಸಿಲುಕಿಸಲು ಸಿದ್ದರಾಮಯ್ಯ ಅವರು ಸಜ್ಜಾಗಿದ್ದು, ಭ್ರಷ್ಟಾಚಾರ ಆರೋಪ ಹೊತ್ತ ಬಿಜೆಪಿ ನಾಯಕರ ವಿರುದ್ಧದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಕುರಿತು ತನಿಖೆ ನಡೆಸಲು ಐವರು ಸಚಿವರ ಸಮಿತಿ ರಚಿಸಿದ್ದಾರೆ.

ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಲು ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದ ಸಮಿತಿ ರಚಿಸಿದ್ದಾರೆ. ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆಂದು ತಿಳಿದುಬಂದಿದೆ.

ಎರಡು ತಿಂಗಳ ಒಳಗೆ ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೆ ಸೂಚಿಸಿದ್ದಾರೆ ಎಂದು ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ.

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಮಿತಿಗೆ ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ ಎರಡು ತಿಂಗಳುಗಳ ಒಳಗೆ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT