ಡಾ. ಶರಣ್ ಪ್ರಕಾಶ್ ಪಾಟೀಲ್ 
ರಾಜ್ಯ

ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಉನ್ನತೀಕರಣಕ್ಕೆ ಆದ್ಯತೆ: ಡಾ. ಶರಣ ಪ್ರಕಾಶ್‌ ಪಾಟೀಲ್‌

ದೇಶದ ಅತ್ಯಂತ ಹಳೆಯ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಹಾಗು ಒಟ್ಟಾರೆಯಾಗಿ ನಾಲ್ಕನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ

ಬೆಂಗಳೂರು: ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಗುರುವಾರ ನಡೆದ ಪದವಿ ಪ್ರದಾನ ಸಮಾರಂಭ ಮತ್ತು ಹೊಸ ಡಿಜಿಟಲ್ ಡೆಂಟಿಸ್ಟ್ರಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ದೇಶದ ಅತ್ಯಂತ ಹಳೆಯ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಹಾಗು ಒಟ್ಟಾರೆಯಾಗಿ ನಾಲ್ಕನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದು ಸಂಸ್ಥೆಯ ಪರಂಪರೆಯ ಬಗ್ಗೆ ಬೆಳಕು ಚೆಲ್ಲಿದರು.

1958ರಲ್ಲಿ ಸ್ಥಾಪನೆಯಾದ ಈ ಕಾಲೇಜು, ದಂತ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಆರು ದಶಕಗಳ ಕಾಲ ಸೇವೆ ಒದಗಿಸಿದೆ. ಈ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆ ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಈಗ ಎಲ್ಲಾ ರಂಗಗಳಲ್ಲಿ ಆಧುನೀಕರಣದ ಅಗತ್ಯವಿದೆ. ಶೀಘ್ರದಲ್ಲೇ ಈ ಸಂಸ್ಥೆಗೂ ಸುಧಾರಿತ ಉಪಕರಣಗಳು ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಘೋಷಿಸಿದರು.

ವೈದ್ಯಕೀಯ ಪದವೀಧರರು ವೃತ್ತಿಪರ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ, ಪ್ರತಿಯೊಬ್ಬ ರೋಗಿಯು ವಿಐಪಿ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮತ್ತು ರೋಗಿಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪರಿಣಾಮಕಾರಿ ಸಂವಹನ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು.

ಡಿಜಿಟಲ್ ಡೆಂಟಿಸ್ಟ್ರಿ ಪ್ರಾರಂಭ: ಅತ್ಯಾಧುನಿಕ ಡಿಜಿಟಲ್ ಡೆಂಟಿಸ್ಟ್ರಿ ಕೇಂದ್ರ CAD/CAM ಸಿಸ್ಟಮ್‌ಗಳು ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ, ದಂತ ವೈದ್ಯಶಾಸ್ತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಸಚಿವರು ವಿವರಿಸಿದರು.

ಅದಾನಿ ಫೌಂಡೇಶನ್‌ನ ಸಹಯೋಗದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಕೋನ್ ಬೀಮ್ ಕಂಪ್ಯೂಟೆಡ್ ಟೊಮೊಗ್ರಫಿ (CBCT) ಸೌಲಭ್ಯವನ್ನು ಒಳಗೊಂಡು, ಶಸ್ತ್ರಚಿಕಿತ್ಸೆ ಮತ್ತು ಇಂಪ್ಲಾಂಟಾಲಜಿ ಸೌಲಭ್ಯ ಹೊಂದಿದೆ. ಸುಧಾರಿತ ರೂಟ್ ಕೆನಾಲ್ ಚಿಕಿತ್ಸೆ ಸೌಲಭ್ಯಕ್ಕಾಗಿ ಮೈಕ್ರೊಸ್ಕೋಪಿಕ್ ಎಂಡೋಡಾಂಟಿಕ್ಸ್, ತಂತ್ರಜ್ಞಾನ ದೊರೆಯಲಿದೆ. ಜೊತೆಗೆ ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ತಂತ್ರಜ್ಞಾನದ ಬಳಕೆಯಿಂದ ಹಲ್ಲಿನ ಸೋಂಕುಗಳ ಪತ್ತೆಗೆ ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT