ಸಚಿವ ಚೆಲುವರಾಯಸ್ವಾಮಿ 
ರಾಜ್ಯ

Nagamangala: 'ಹಿಂದೂ-ಮುಸ್ಲಿಂ ಯಾರೇ ಆದರೂ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ': ಸಚಿವ ಚೆಲುವರಾಯಸ್ವಾಮಿ

ನಮ್ಮ ನಾಗಮಂಗಲ ಶಾಂತಿ, ಸೌಹಾರ್ದತೆಯ ನೆಲೆ. ಇಲ್ಲಿ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಸಾರ್ವಜನಿಕರು ಯಾವುದೇ ವದಂತಿ ಪ್ರೇರಣೆಗಳಿಗೆ ಕಿವಿಗೊಡದೆ ಶಾಂತಿ ಮರುಸ್ಥಾಪನೆಗೆ ಸಹಕರಿಸಬೇಕೆಂದು ಕೋರುತ್ತೇನೆ.

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಘಟನೆ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿ, 'ನಮ್ಮ ನಾಗಮಂಗಲ ಶಾಂತಿ, ಸೌಹಾರ್ದತೆಯ ನೆಲೆ. ಇಲ್ಲಿ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಸಾರ್ವಜನಿಕರು ಯಾವುದೇ ವದಂತಿ ಪ್ರೇರಣೆಗಳಿಗೆ ಕಿವಿಗೊಡದೆ ಶಾಂತಿ ಮರುಸ್ಥಾಪನೆಗೆ ಸಹಕರಿಸಬೇಕೆಂದು ಕೋರುತ್ತೇನೆ.

ಘಟನೆ ತಿಳಿದ ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿ, ವರದಿ ಪಡೆದಿದ್ದೇನೆ. ನಾವು ಯಾವುದೇ ಸಮುದಾಯ ಅಥವಾ ಜಾತಿಗೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ, ಅದು ಹಿಂದೂ ಅಥವಾ ಮುಸ್ಲಿಂ ಅಥವಾ ಇನ್ಯಾರೇ ಆಗಿರಲಿ.. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರು, ಸಮುದಾಯಗಳ ನಡುವೆ ಬಿರುಕು ಸೃಷ್ಟಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ತಪ್ಪಿತಸ್ಥರ ಬಂಧನಕ್ಕೆ ಸೂಚಿಸಿದ್ದು ಶಾಂತಿ‌ ಮರುಸ್ಥಾಪನೆಗೆ ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.

ತಾವು ಪ್ರವಾಸದಲ್ಲಿದ್ದು ನಿನ್ನೆ ಸಂಜೆಯಷ್ಟೇ ವಿಮಾನದಲ್ಲಿ ಬಂದಿಳಿದೆ. ಈ ನಡುವೆ ನಾಗಮಂಗಲದಲ್ಲಿ ಗಲಭೆ ಸಂಭವಿಸಿದೆ ಎಂದು ಮಾಹಿತಿ ತಿಳಿಯಿತು. ತಕ್ಷಣವೇ ಎಸ್ಪಿ, ಐಜಿಪಿ, ಎಡಿಜಿಪಿ ಅವರಿಗೆ ಕರೆ ಮಾಡಿ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೆ. ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಗಣಪತಿ ಮೂರ್ತಿಯ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ನಡುವೆ ಕೂಗಾಟ ಹಾಗೂ ಘರ್ಷಣೆ ನಡೆದಿದೆ. 40 ವರ್ಷಗಳಿಂದ ನಾನು ಶಾಸಕನಾಗಿದ್ದೇನೆ. ಹಿಂದೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಆದರೆ, ಈ ರೀತಿ ಘಟನೆ ಆಗಿರಲಿಲ್ಲ. ಬಹಳ ವರ್ಷಗಳಿಂದ ಹೀಗಾಗಿರಲಿಲ್ಲ. ದುರದೃಷ್ಟವಶಾತ್‌ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕ್ರಮವಹಿಸಲಿದೆ ಎಂದರು.

ಅಂತೆಯೇ ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. ಸೆಕ್ಷನ್‌ 144 ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ ನಷ್ಟ, ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗುತ್ತಿದೆ. ಅನಗತ್ಯವಾಗಿ ಸಂಘರ್ಷ ಬೇಡ. ಅನಾಹುತಗಳಾದರೆ ಅದರಿಂದಾಗುವ ನಷ್ಟ ತೀವ್ರವಾಗಿರುತ್ತದೆ. ಯಾರೂ ದುಡುಕಬೇಡಿ, 40 ವರ್ಷಗಳಿಂದ ನಾಗಮಂಗಲದಲ್ಲಿ ಶಾಂತಿ ನೆಲೆಸಿದೆ. ದೇವರ ಕೆಲಸ ಗಲಭೆಗೆ ಕಾರಣವಾಗುವುದು ಬೇಡ ಎಂದು ತಾವು ಮನವಿ ಮಾಡಿದ್ದು, ಕೊನೆಗೆ ಗಣೇಶ ವಿಸರ್ಜನೆಯಾಗಿದೆ. ಸಂಘರ್ಷದಲ್ಲಿ ಒಂದಿಷ್ಟು ಸಣ್ಣಪುಟ್ಟ ಘಟನೆಗಳು ನಡೆದಿವೆ. ಅಂಗಡಿಗಳಿಗೆ, ಬೈಕ್‌ಗಳಿಗೆ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದರು.

ಒಂದು ಸಮುದಾಯ ಪೊಲೀಸ್‌‍ ಠಾಣೆಯ ಮುಂದೆ ಗಣೇಶನನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದೆ, ಆಗ ಮತ್ತೆ ವಾಗ್ವಾದ ನಡೆದು ಸಂಘರ್ಷ ಹೆಚ್ಚಾಗಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಬಂದು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಮ ಜೊತೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಗಳಿಗೂ ಸೂಕ್ತ ಸೂಚನೆ ನೀಡಿದ್ದಾರೆ. ಮೊದಲಿಗೆ ನಮ್ಮ ಆದ್ಯತೆ ಪರಿಸ್ಥಿತಿಯನ್ನು ತಹಬದಿಗೆ ತಂದು ಶಾಂತಿ ನೆಲೆಸುವುದಾಗಿದೆ. ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪೊಲೀಸರು ಈಗಾಗಲೇ ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೇ ವೇಳೆ ವಿಪಕ್ಷಗಳ ಟೀಕೆ ವಿಚಾರವಾಗಿ ಮಾತನಾಡಿದ ಸಚಿವರು, 'ಇಲ್ಲಿ ಅಧಿಕಾರದ ಪ್ರಶ್ನೆ ಇಲ್ಲ. ಸಾರ್ವಜನಿಕರ ನೆಮ್ಮದಿಯ ವಿಚಾರವಾಗಿದೆ. ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರ ಪುತ್ರ ಭಾಗಿಯಾಗಿರುವುದು, ಪೊಲೀಸರ ವೈಫಲ್ಯ, ಎರಡೂ ಸಮುದಾಯಗಳ ನಾಯಕರ ಲೋಪಗಳು ಸೇರಿದಂತೆ ಎಲ್ಲಾ ವಿಚಾರಗಳನ್ನೂ ಸಾವಧಾನದಿಂದ ಪರಿಶೀಲಿಸಬೇಕು. ಸದ್ಯಕ್ಕೆ ನಮಗೆ ಜನರ ಹಿತದೃಷ್ಟಿ ಮುಖ್ಯ ಎಂದು ಹೇಳಿದರು.

ಕಂದಾಯ ಇಲಾಖೆಯಿಂದ ಸಮೀಕ್ಷೆ

ಇದೇ ವೇಳೆ 'ಸದ್ಯ ಪರಿಸ್ಥಿತಿ ಶಾಂತವಾಗಿದೆ. ಕೆಲವು ಅಂಗಡಿಗಳು ಮತ್ತು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಹಲವಾರು ಅಂಗಡಿಕಾರರು ದೂರು ದಾಖಲಿಸಿದ್ದಾರೆ. ಕಂದಾಯ ಇಲಾಖೆ ಮತ್ತು ಪೊಲೀಸರು ಇಂದು ಸಂಜೆ ವೇಳೆಗೆ ಹಾನಿಯ ಸಮೀಕ್ಷೆ ನಡೆಸಿ ಅಂದಾಜು ಮಾಡಿ ವರದಿ ಸಲ್ಲಿಸಲಿದ್ದಾರೆ. ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿದರು.

54 ಮಂದಿ ಬಂಧನ

ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಎಫ್ಐಎರ್ ಗಳನ್ನು ದಾಖಲಿಸಲಾಗಿದೆ. ಅಂತೆಯೇ ಈ ವರೆಗೂ 54 ಮಂದಿಯನ್ನು ಬಂಧಿಸಲಾಗಿದೆ.

ಗಣಪತಿ ಮೆರವಣಿಗೆ ನಿಲ್ಲಿಸಿ ಐದರಿಂದ ಏಳು ನಿಮಿಷಗಳ ಕಾಲ ದರ್ಗಾ ಮುಂದೆ ನೃತ್ಯ ಮಾಡಲು ಪ್ರಾರಂಭಿಸಿದಾಗ ಈ ಘಟನೆ ನಡೆದಿದೆ. ಇದನ್ನು ಅನುಸರಿಸಿ, ಇತರ ಗುಂಪಿನ ಜನರು ಬಂದು ಮೆರವಣಿಗೆಯನ್ನು ಕೈ ಬಿಡಲು ಹೇಳಿದರು. ಇದು ಮಾತಿನ ಚಕಮಕಿಗೆ ಕಾರಣವಾಯಿತು. ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ಈ ಎರಡು ಗುಂಪುಗಳ ನಡುವೆ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇದರಿಂದ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗುಂಪು ನಾಗಮಂಗಲ ಠಾಣೆಯ ಮುಂದೆ ಧರಣಿ ನಡೆಸಿ, ಮೆರವಣಿಗೆ ಮುಂದುವರಿಸಲು ಪೊಲೀಸರು ಬಿಡುತ್ತಿಲ್ಲ ಎಂದು ಆರೋಪಿಸಿದರು. ಪೊಲೀಸರು ಗುಂಪಿನ ಮನವೊಲಿಸಲು ಪ್ರಯತ್ನಿಸಿದರು ಮತ್ತು ಅವರ ಗಣೇಶ ವಿಸರ್ಜನೆ ಮೆರವಣಿಗೆಯನ್ನು ಮುಂದುವರಿಸಲು ಅವಕಾಶ ನೀಡಿದರು ಎಂದು ಹೇಳಿದರು.

ಈ ವೇಳೆ ಎರಡೂ ಕಡೆಯಿಂದ ಹಲವರು ಜಮಾಯಿಸಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಮತ್ತೆ ಸಕ್ರಿಯರಾಗಬೇಕಾಯಿತು. ಗುಂಪುಗಳು ಹಿಂತಿರುಗುವಾಗ, ಅವರು ಅಂಗಡಿಗಳು ಮತ್ತು ಬೈಕ್‌ಗಳಿಗೆ ಬೆಂಕಿ ಹಚ್ಚಿದರು. ಘಟನೆಯಲ್ಲಿ ಏಳು ಬೈಕ್‌ಗಳು ಮತ್ತು ಆರು ಸಣ್ಣ ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಒಟ್ಟು 15 ಬೈಕ್‌ಗಳು ಮತ್ತು ಕಾರಿಗೆ ಸ್ವಲ್ಪ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT