ಹಾನಿಗೊಳಗಾದ ಅಂಗಡಿಗಳ ಪರಿಶೀಲಿಸುತ್ತಿರುವ ಕುಮಾರಸ್ವಾಮಿ. 
ರಾಜ್ಯ

ಗಣೇಶ ವಿಸರ್ಜನೆ ವೇಳೆ ಹಿಂಸಾಚಾರ: ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ, ಮಾಹಿತಿ ಸಂಗ್ರಹ

ಸ್ಥಳದಲ್ಲೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಈ ರೀತಿಯ ಅವಾಂತರ ಸಂಭವಿಸುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ, ಇದು ನಿಜವಾಗಿಯೂ ನೋವಿನ ಸಂಗತಿ.

ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆಯಲ್ಲಿ ಹಿಂಸಾಚಾರ, ಗಲಭೆ ಸಂಭವಿಸಿರುವ ಮಂಡ್ಯ ಜಿಲ್ಲೆ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಭೇಟಿ ನೀಡಿದ್ದು, ಅಧಿಕಾರಿಗಳಿಂದ ವಾಸ್ತವಿಕ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

ಭೇಟಿ ವೇಳೆ ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳ ಮಾಲೀಕರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಅವರ ಅಳಲು ಆಲಿಸಿದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿಯವರಿಗೆ ಮಾಜಿ ಶಾಸಕರಾದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಸಾಥ್ ನೀಡಿದರು.

ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಸ್ಥಳದಲ್ಲೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಈ ರೀತಿಯ ಅವಾಂತರ ಸಂಭವಿಸುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ, ಇದು ನಿಜವಾಗಿಯೂ ನೋವಿನ ಸಂಗತಿ. ಸಮಾಜದ ಶಾಂತಿ ಕದಡುವ ಯಾರನ್ನೂ ನಾನು ಬೆಂಬಲಿಸುವುದಿಲ್ಲ. ನನಗೆ ಶಾಂತಿಯುತ ವಾತಾವರಣ ಬೇಕು. ಸಮುದಾಯಗಳು ಸಹೋದರ ಸಹೋದರಿಯರಂತೆ ಬಾಳಬೇಕ. ಇದು ನನ್ನ ದೃಷ್ಟಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿ ನೆಲದ ವಾಸ್ತವತೆಯನ್ನು ನೋಡಬೇಕೆನಿಸಿತು. ಹೀಗಾಗಿ ಭೇಟಿ ನೀಡಿದ್ದೇನೆ. ಎಸ್ಪಿ ಮತ್ತು ಜಿಲ್ಲಾಡಳಿತ ಮಂಡಳಿ ಉತ್ತಮ ಕೆಲಸ ಮಾಡಿದೆ, ಅವರ ಮಧ್ಯಸ್ಥಿಕೆ ಮತ್ತು ತಕ್ಷಣದ ಕ್ರಮದಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಾನು ಅನಗತ್ಯವಾಗಿ ದೂಷಿಸಲು ಬಯಸುವುದಿಲ್ಲ ಎಂದು ಹೇಳಿದರು.

ಘಟನೆ ನಡೆದ ಬುಧವಾರ ರಾತ್ರಿಯೇ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ.

ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT