ಇಂದಿರಾ ಕ್ಯಾಂಟೀನ್ ನಲ್ಲಿ ಜೋಳದ ರೊಟ್ಟಿ ಸವಿದ ಸಚಿವ ಸಂತೋಷ್ ಲಾಡ್ 
ರಾಜ್ಯ

ಇಂದಿರಾ ಕ್ಯಾಂಟೀನ್‌ 'ಹೊಸ ಮೆನು'ಗೆ ಸಚಿವ ಸಂತೋಷ್ ಲಾಡ್ ಚಾಲನೆ

ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ.

ಧಾರವಾಡ: ಇಂದಿರಾ ಕ್ಯಾಂಟೀನ್‍ನ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಬುಧವಾರ ಚಾಲನೆ ನೀಡಿದರು.

ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ನಲ್ಲಿ ಸಂತೋಷ್ ಲಾಡ್ ಅವರು ಹೊಸ ಆಹಾರ ಪಟ್ಟಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವದ ಕೊಡುಗೆಯಾಗಿದೆ. ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ಇಂದಿರಾ ಕ್ಯಾಂಟೀನ್‍ದಿಂದ ಪ್ರತಿದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ. ಅದರಂತೆ ಇಂದಿರಾ ಕ್ಯಾಂಟೀನ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಬಳಿಕ ಸಚಿವರು ಐದು ರೂ. ಹಣ ಕೊಟ್ಟು ಟೋಕನ್ ಖರೀದಿಸಿ, ಜೋಳದ ರೊಟ್ಟಿ ಊಟ ಸವಿದರು. ಈ ಸಂದರ್ಭದಲ್ಲಿ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಪಾಲಿಕೆ ಸದಸ್ಯ ಡಾ.ಮಯೂರ ಮೋರೆ, ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!