ಪ್ರಜ್ವಲ್ ರೇವಣ್ಣ 
ರಾಜ್ಯ

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಹೈಕೋರ್ಟ್

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.

ಬೆಂಗಳೂರು: ಸೆಕ್ಸ್ ವಿಡಿಯೋ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.

ಸಂತ್ರಸ್ತೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮಾಜಿ ಸಂಸದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠ, ಸಂತ್ರಸ್ತೆಯರ ಖಾಸಗಿತನವನ್ನು ರಕ್ಷಿಸುವ ಉದ್ದೇಶದಿಂದ ಗೌಪ್ಯವಾಗಿ ವಿಚಾರಣೆ ನಡೆಸಬೇಕು ಎಂಬ ಪ್ರಾಸಿಕ್ಯೂಷನ್ ಮನವಿಯನ್ನು ತಿರಸ್ಕರಿಸಿದೆ.

ವಿಚಾರಣೆಯನ್ನು ತೆರೆದ ನ್ಯಾಯಾಲಯದಲ್ಲಿ ನಡೆಸಲಾಗುವುದು. ಆದರೆ ಸಂತ್ರಸ್ತರ ಹೆಸರುಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸ್ಪಷ್ಟ ಸಂಗತಿಗಳನ್ನು ಓದದಂತೆ ವಕೀಲರಿಗೆ ನಿರ್ದೇಶಿಸಿದ ಹೈಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.

ಹೊಳೆನರಸೀಪುರ ಟೌನ್ ಪೊಲೀಸರು ದಾಖಲಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ 2,144 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.

ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆಯ 47 ವರ್ಷದ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ ಮತ್ತು ನಂತರ ಸಂತ್ರಸ್ತೆಯ ಮಗಳಿಗೆ ಪೋರ್ನ್ ವೀಡಿಯೊಗಳನ್ನು ಕಳುಹಿಸಿದ ಮತ್ತು ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ವೋಟ್ ಚೋರಿಯಿಂದ ಕಾನೂನು ಚೋರಿ' : ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು,EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

'ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ': ದೇಶ ದ್ರೋಹಿ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ; 48 ಗಂಟೆಗಳ ಗಡುವು ನೀಡಿದ CJP!

ಕಾಂಬೋಡಿಯಾ ಗರ್ಲ್​​​ಫ್ರೆಂಡ್​ ಜತೆ ವಿವಾಹವಾಗಲು ಹರಿಯಾಣ ಗ್ಯಾಂಗ್‌ಸ್ಟರ್‌ಗೆ ಕಸ್ಟಡಿ ಪೆರೋಲ್; ಫಾರ್ಮ್‌ಹೌಸ್‌ನಲ್ಲಿ ಮದುವೆ! Video ನೋಡಿ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ವಿಪಕ್ಷಗಳು: ಸಂಸತ್ತಿನ ಉಭಯ ಸದನಗಳಲ್ಲಿ ಮಹಾಭಿಯೋಗ ನಿರ್ಣಯ ಮಂಡಿಸಲು ಮುಂದು!

ಮಹಾದೇವ್ ಆನ್‌ಲೈನ್ ಆ್ಯಪ್ ಇನ್ನೂ ಸಕ್ರಿಯ, ಅಕ್ರಮ ಬೆಟ್ಟಿಂಗ್ ಮೂಲಕ 94,000 ಕೋಟಿ ರೂ.ಗೂ ಹೆಚ್ಚು ಹಣ ಗಳಿಕೆ: ED